ಹಿಮಾಚಲ ಪ್ರದೇಶ ರಾಜ್ಯ ಸಚಿವಾಲಯಕ್ಕೆ ಹುಸಿ ಬಾಂಬ್ ಬೆದರಿಕೆ; ಕೆಲ ಕಾಲ ಆತಂಕ

ಶಿಮ್ಲಾ: ಹಿಮಾಚಲ ಪ್ರದೇಶ ರಾಜ್ಯ ಸಚಿವಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿದ್ದು ಕೆಲ ಸಮಯ ಆತಂಕ ಉಂಟು ಮಾಡಿತ್ತು. ಸಚಿವಾಲಯದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಲಾಗಿತ್ತು. ಭದ್ರತಾ ಪಡೆಗಳು ತೀವ್ರ ಶೋಧ ನಡೆಸಿದಾಗ ಸ್ಪೋಟಕ ಅಥವಾ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಫೋಟಕ ವಸ್ತುವಿನ ಬಗ್ಗೆ ಮಾಹಿತಿ ಬಂದ ನಂತರ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ರಾಜ್ಯ ಸಚಿವಾಲಯಕ್ಕೆ ಧಾವಿಸಿ ಆವರಣದ ಸಂಪೂರ್ಣ ಶೋಧ ನಡೆಸಿದವು. ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದರೂ, ಮುನ್ನೆಚ್ಚರಿಕೆ ಕ್ರಮವಾಗಿ ಸಚಿವಾಲಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇಮೇಲ್‌ನ ಮೂಲವನ್ನು ಗುರುತಿಸಲು ತನಿಖೆ ನಡೆಯುತ್ತಿದೆ. ಈ ವರ್ಷದಲ್ಲಿ ಸಚಿವಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವುದು ಇದು ಎರಡನೇ ಬಾರಿ. ಏಪ್ರಿಲ್‌ನಲ್ಲಿಯೂ ಸಹ, ಸಚಿವಾಲಯದಲ್ಲಿ ಬಾಂಬ್ ಬೆದರಿಕೆ ಕರೆ ಬಂದಿತ್ತು.

More articles

Latest article

Most read