ಐಪಿಎಸ್ ಅಧಿಕಾರಿ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ: ಆರೋಪಿ ಸೆರೆ

ಬೆಳಗಾವಿ: ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿದ್ದ ಖದೀಮನೊಬ್ಬನನ್ನು ಜಿಲ್ಲಾ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನ ಮೂಲದ ಅರ್ಬಾಜ್ ಖಾನ್ ಬಂಧಿತ ಆರೋಪಿ. ಈತ ಹಿರಿಯ ಐಪಿಎಸ್‌ ಅಧಿಕಾರಿಗಳಾದ ಭೀಮಾಶಂಕರ ಗುಳೇದ್, ನೇಮಗೌಡ, ಮಲ್ಲಿಕಾರ್ಜುನ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ  ತೆರದಿದ್ದ. ನಂತರ ಹಲವಾರು ಮಂದಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸುತ್ತಿದ್ದ. ಬಳಿಕ ಇಂದು ನನ್ನ ಹುಟ್ಟಿದ ಹಬ್ಬ ಇದೆ ಎಂದು ಪೋಸ್ಟ್ ಹಾಕುತ್ತಿದ್ದ.  ಶುಭಾಶಯ ತಿಳಿಸಿದವರಿಗೆ ವಿವಿಧ ಕಾರಣಗಳನ್ನು ಹೇಳಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಈ ರೀತಿ ಹಲವಾರು ಮಂದಯಿಂದ ಹಣ ವಸೂಲಿ ಮಾಡಿದ್ದಾನೆ ಎನ್ನಲಾಗಿದೆ. ತಮ್ಮ ಹೆಸರಿನಲ್ಲಿ ನಕಲಿಫೇಸ್‌ ಬುಕ್‌ ಖಾತೆ ಇರುವುದನ್ನು ತಿಳಿಯುತ್ತಿದ್ದಂತೆ  ಬೆಳಗಾವಿ ಎಸ್‌ಪಿ ಭೀಮಾಶಂಕರ ಗುಳೇದ್ ಪ್ರಕರಣ ದಾಖಲಿಸಿದ್ದರು.  ಆರೋಪಿಗಳ ಪತ್ತೆಗಾಗಿ ಸಿಪಿಐ ಸುನೀಲ್ ನಂದೇಶ್ವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರು ನಕಲಿ ಖಾತೆ ಸೃಷ್ಟಿಸಿದ್ದ ಅರ್ಬಾಜ್ ಖಾನ್‌ನನ್ನು ಬಂಧಿಸಿದ್ದಾರೆ.

More articles

Latest article

Most read