Wednesday, May 22, 2024

ಕೌಟುಂಬಿಕ ಕಲಹ ಹಿನ್ನೆಲೆ: ಕಾನ್ಸ್ ಟೇಬಲ್ ಸಾವಿಗೆ ಶರಣು

Most read

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಸಾವಿಗೆ ಶರಣಾಗಿರುವ ಘಟನೆ ಸಕಲೇಶಪುರದಲ್ಲಿ ವರದಿಯಾಗಿದೆ.

ಸೋಮಶೇಖರ್ (39) ಆತ್ಮಹತ್ಯೆಗೆ ಶರಣಾದ ಕಾನ್ಸ್‌ಟೇಬಲ್.

ಹಾಸನ ಜಿಲ್ಲೆ, ಸಕಲೇಶಪುರ ಪಟ್ಟಣದ, ಪೊಲೀಸ್ ಕ್ವಾಟರ್ಸ್‌ನಲ್ಲಿ ಘಟನೆ ನಡೆದಿದ್ದು, 112 ಪೊಲೀಸ್ ವಾಹನದ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಈ ಕ್ರೂರ ನಿರ್ಧಾರ ಕೈಗೊಂಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಜರು ಕಾರ್ಯ ಕೈಗೊಂಡಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

More articles

Latest article