ನವದೆಹಲಿ: ತಮಿಳುನಾಡಿನಿಂದ ರಾಜ್ಯಸಭೆ ಸದಸ್ಯರಾಗಿ ಖ್ಯಾತ ನಟ, ಮಕ್ಕಳ್ ನೀಧಿ ಮೈಯ್ಯಂ (ಎಂ ಎನ್ ಎಂ) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಇಂದು ಪ್ರಮಾವಚನ ಸ್ವೀಕರಿಸಿದ್ದಾರೆ.
ಕಮಲ್ ಹಾಸನ್ ಅವರಿಗೆ ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ನಾರಾಯಣ ಸಿಂಗ್ ಅವರು ಪ್ರಮಾಣವಚನ ಬೋಧಿಸಿದರು. ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷ ತನ್ನ ಮಿತ್ರಪಕ್ಷವಾದ ಎಂ ಎನ್ ಎಂ ಪಕ್ಷಕ್ಕೆ ಒಂದು ಸ್ಥಾನ ಬಿಟ್ಟುಕೊಟ್ಟಿತ್ತು. ಆ ಮೂಲಕ ರಾಜ್ಯಸಭೆಗೆ ಕಮಲ್ ಹಾಸನ್ ಅವರ ಆಯ್ಕೆಯನ್ನು ಬೆಂಬಲಿಸಿತ್ತು.
ಈ ಹಿಂದೆ ಕಮಲ್ ಹಾಸನ್ ನೇತೃತ್ವದ ಎಂ ಎನ್ ಎಂ ಪಕ್ಷದ ಜೊತೆ 2024ರ ಲೋಕಸಭಾ ಚುನಾವಣೆಗೆ ಮೊದಲು ಮಾಡಿಕೊಂಡ ಒಪ್ಪಂದ ಅನ್ವಯ ಆ ಪಕ್ಷಕ್ಕೆ ಒಂದು ಸ್ಥಾನ ಬಿಟ್ಟುಕೊಡಲಾಗಿತ್ತು.