ಬೆಂಗಳೂರು : “ರೈತರು ಕೃಷಿಯಲ್ಲಿ ಹೆಚ್ಚಿನ ಇಳುವರಿ ಪಡೆದರೆ ಸಾಲದು, ರೈತರ ಸಬಲೀಕರಣ ಆಗಬೇಕಾದರೆ, ರೈತರು ಕೃಷಿ ಉತ್ಪಾದನೋತ್ತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಯಾವಾಗಲೂ ಸಹಕಾರಿಯಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಅರಮನೆ ಮೈದಾನದಲ್ಲಿ “ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2026 ಹಾಗೂ ಉತ್ಪಾದನೋತ್ತರ ಕೃಷಿ-ರೈತರ ಸಬಲೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು

ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿಗಳು ಪ್ರಶಸ್ತಿ ಸ್ವೀಕರಿಸಿದ ರೈತರಿಗೆ ಅಭಿನಂದನೆ ಸಲ್ಲಿಸಿ ” ಪ್ರಶಸ್ತಿ ಸ್ವೀಕರಿಸಿದ ರೈತರು ಇತರ ರೈತರಿಗೆ ಸ್ಪೂರ್ತಿಯಾಗಬೇಕು” ಎಂದರು.
ಕೃಷಿ ಸಚಿವ ಚಲುವರಾಯಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.


