ಬೆಂಗಳೂರು : CWRC ತೀರ್ಪನ್ನು ಖಂಡಿಸಿ ಮಂಡ್ಯದ ರೈತರು ಆಕ್ರೋಶಗೊಂಡಿದ್ದು, ಕುಡಿಯುವ ನೀರಿಗೆ ಅಭಾವ ಎದುರಾಗಿದ್ದು, ತಮಿಳುನಾಡಿಗೆ ಬೆಳೆಗಳಿಗೆ ನೀರು ಬಿಡಲು ಸಾದ್ಯವಿಲ್ಲ ಎಂದು ಮಂಡ್ಯದ ಸಂಜಯ್ ವೃತ್ತದಲ್ಲಿ ಉರುಳು ಸೇವೆ ಮಾಡಿ ಪ್ರತಿಭಟಿಸುತ್ತಿದ್ದಾರೆ.
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು. ಬಿಟ್ಟರೆ ಉಗ್ರ ಹೋರಾಟ ಮಾಡುವುದಾಗಿ ರೈತರು ಎಚ್ಚರಿಸಿದ್ದಾರೆ.
ಮಂಡ್ಯ ಶಾಸಕ ರವಿಕುಮಾರ್ ಗಣಿಗ ವಿಡಿಯೋ ಮಾಡಿದ್ದು, ಚಿದಂಬರ್ ಜಿಲ್ಲೆಯಲ್ಲಿ ಕಾವೇರಿ ನದಿ ನೀರು ವ್ಯರ್ಥವಾಗಿ ಸಮುದ್ರ ಪಾಲಾಗುತ್ತಿದೆ. ಇದನ್ನು ತಡೆದು ಮೇಕೆದಾಟು ಯೋಜನೆ ಕಟ್ಟವುದರಿಂದ ಉಪಯೋಗವಾಗಲಿದೆ. ಇದನ್ನು ತಮಿಳುನಾಡು ಸರ್ಕಾರ ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.
ಆ.3 ರಂದು ಮೇಕೇದಾಟು ಸಂಧಾನ ಸಭೆ
ಕಾವೇರಿ ನೀರು ವಿವಾದ ವಿಚಾರವಾಗಿ ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ನಡುವಿನ ಸಂದಾನ ಮಾತುಕತೆಗೆ ವೇದಿಕೆ ಸಿದ್ಧವಾಗಿದೆ.
ಮಳೆ ಕೊರತೆಯ ಕಾರಣ ಜಲಾಶಯಗಳಲ್ಲಿನ ನೀರಿನ ಸಂಗ್ರಹ ತಳ ತಲುತ್ತಿದ್ದು, ಕಾವೇರಿ ನದಿ ನೀರು ಹಂಚಿಕೆ ವಿವಾದದ ಸ್ವರೂಪ ಪಡೆಯುತ್ತಿರುವ ಮಧ್ಯೆಯೇ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ನೇರ ಮಾತುಕತೆಗೆ ಮುಂದಾಗಿದ್ದಾರೆ. ಆಗಸ್ಟ್ 3ರ ಮಧ್ಯಾಹ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಿಗದಿಯಾಗಿದೆ.
ಈ ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿದ್ಧತೆ ನಡೆಯುತ್ತಿವೆ. ಸ್ವಚ್ಛತೆ, ಎಸಿ ಕ್ಲೀನಿಂಗ್, ನೆಲಹಾಸು ಬದಲಾವಣೆ ಸೇರಿದಂತೆಉಭಯ ರಾಜ್ಯಗಳ ಬಾವುಟ ಮತ್ತು ಲಾಂಛನಗಳ ಅಳವಡಿಕೆ ಕಾರ್ಯ ನಡೆದಿದೆ. ಇನ್ನು ಈ ಸಭೆಯಲ್ಲಿ ಎರಡೂ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳು ಸೇರಿ ಒಟ್ಟು 25 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.

