ಹಾಲಿನ ಖರೀದಿ ದರ ಹೆಚ್ಚಿಸಲು ಆಗ್ರಹಿಸಿ ಧರಣಿ

Most read

ಬೆಂಗಳೂರುಹಾಲಿನ ಖರೀದಿ ದರ ಹೆಚ್ಚಿಸಬೇಕು, ಪಶು ಆಹಾರದ ಬೆಲೆ ಕಡಿಮೆಗೊಳಿಸಬೇಕು ಎನ್ನುವುದೂ  ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಕರ್ನಾಟಕ ಹಾಲು ಒಕ್ಕೂಟ ಮಹಮಂಡಳ( ಕೆಎಂಎಫ್) ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಆಗಮಿಸಿದ ನೂರಾರು ರೈತರು ಮತ್ತು ರೈತ ಮಹಿಳೆಯರು ಕೇಂದ್ರ ಕಚೇರಿ ಎದುರು ಪ್ರತಿಭಟನೆ‌ ನಡೆಸಿ ಘೋಷಣೆಗಳನ್ನು ಕೂಗಿದರು.

ಸರ್ಕಾರ ಹಾಲಿಗೆ ನೀಡುವ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‌ಗೆ ರೂ. 5 ರಿಂದ ರೂ.10ಕ್ಕೆ ಹೆಚ್ಚಿಸಬೇಕು. ಪಶು ಆಹಾರಕ್ಕೆ ಬಳಸುವ ಮೆಕ್ಕೆಜೋಳವನ್ನು ರೈತರಿಂದಲೇ ನೇರವಾಗಿ ಖರೀದಿಸಬೇಕು ಎಂದು ಒತ್ತಾಯಿಸಿದರು.

More articles

Latest article