Wednesday, December 11, 2024

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ  ಪ್ರತಿಭಟನೆ

Most read

ನವದೆಹಲಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಬೃಹತ್‌ ಪ್ರತಿಭಟನೆ ನಡೆಯಲಿದ್ದು, ಶಂಭು ಗಡಿಯಲ್ಲಿ ರೈತರು ಈಗಾಗಲೇ ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ.  ಶುಕ್ರವಾರ ಮಧ್ಯಾಹ್ನದಿಂದ ಪ್ರತಿಭಟನೆ ಆರಂಭವಾಗಲಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿಂದೆ ದೆಹಲಿ ಉತ್ತರ ಪ್ರದೇಶ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ರೈತರು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

 ಎಂಎಸ್‌ಪಿಗೆ ಕಾನೂನುಬದ್ಧ ಖಾತರಿ, ರೈತರು ಸಾಲ ಮನ್ನಾ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ ವ್ಯವಸ್ಥೆ,  ವಿದ್ಯುತ್ ದರವನ್ನು ಹೆಚ್ಚಿಸಬಾರದು, 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ, 2013 ರ ಭೂ ಸ್ವಾಧೀನ ಕಾಯಿದೆಯನ್ನು ಮರುಸ್ಥಾಪಿಸಲು ಒತ್ತಾಯ ಮತ್ತು  2020-21 ರಲ್ಲಿ ಹಿಂದಿನ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕೆಂದು ರೈತರು ಪ್ರತಿಭಟನೆ ನಡೆಸುತ್ತಿದಾರೆ.

More articles

Latest article