Wednesday, May 22, 2024

ಫೆ .7 ರಂದು ಕೇಂದ್ರದ ವಿರುದ್ದ ದೆಹಲಿಯಲ್ಲಿ ಪ್ರತಿಭಟನೆಗೆ ರಾಜ್ಯ ಕಾಂಗ್ರೆಸ್‌ ಸಿದ್ದತೆ

Most read

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಅನುದಾನ ಬಿಡುಗಡೆ ಮಾಡುವಲ್ಲಿ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ  ಇದೇ ಫೆ.7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಶುಕ್ರವಾರ ತಿಳಿಸಿದ್ದಾರೆ.

ಈ ಧರಣಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿದ್ದು, 138 ಶಾಸಕರು, ಕಾಂಗ್ರೆಸ್ ಎಂಎಲ್‌ಸಿಗಳು ಮತ್ತು ಸಂಸದರು ಭಾಗವಹಿಸಲಿದ್ದಾರೆ ಎಂದರು. ಇದರಲ್ಲಿ ಎಲ್ಲಾ 136 ಶಾಸಕರು ಮತ್ತು ಇಬ್ಬರು ಪಕ್ಷೇತರ ಶಾಸಕರು ಮತ್ತು ಎಂಎಲ್‌ಸಿಗಳು ಫೆಬ್ರವರಿ 6 ರಂದು ನವದೆಹಲಿ ತಲುಪಿ ಫೆಬ್ರವರಿ 7 ರಂದು ಪ್ರತಿಭಟನೆ ನಡೆಸಲಿದ್ದಾರೆ.

ʼದೆಹಲಿಯಲ್ಲಿರುವ ಕೇಂದ್ರ ಸರ್ಕಾರ ನಮ್ಮ ಧ್ವನಿಯನ್ನು ಕೇಳಬೇಕೆಂದು ನಾವು ಬಯಸುತ್ತೇವೆ ಮತ್ತು ರಾಜ್ಯದ ಎಲ್ಲ ಸಂಸದರು ರಾಜಕೀಯ ಭಿನ್ನಾಭಿಪ್ರಾಯ ಹಾಗೂ ಪಕ್ಷ ಭೇದ ಬದಿಗಿಟ್ಟು ಧರಣಿಯಲ್ಲಿ ಪಾಲ್ಗೊಳ್ಳಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್‌ ಮನವಿ ಮಾಡಿದರು.

ಕಳೆದ ಐದು ವರ್ಷಗಳಲ್ಲಿ ನಮ್ಮ ಪಾಲಿನ 62,000 ಕೋಟಿ ರೂ. ಹಣ ನಮಗೆ ತಲುಪಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ‘ಡಬಲ್ ಇಂಜಿನ್’ ಸರ್ಕಾರದ ಅವಧಿಯಲ್ಲಿಯೂ ಕೇಂದ್ರದ ಅನುದಾನದಲ್ಲಿ ಕರ್ನಾಟಕದ ಪಾಲು ಕಡಿತವಾಗಿತ್ತು. ಆದ್ದರಿಂದ ಕೇಂದ್ರ ಸರ್ಕಾರಕ್ಕೆ ರಾಜ್ಯದ ಸಮಸ್ಯೆಯನ್ನು ಹೇಳಲು ನಾವೇ ದೆಹಲಿಗೆ ಹೋಗುತ್ತಿದ್ದೆವೆ. ಅದರಂತೆ ಫೆ.7ರಂದು ಪ್ರತಿಭಟನೆ ನಡೆಸಲು ಅನುಮತಿ ಕೋರಿ ದೆಹಲಿಯಲ್ಲಿ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದರು.

ಈ ಬಾರಿ ಕರ್ನಾಟಕದಲ್ಲಿನ 236 ತಾಲ್ಲೂಕುಗಳಲ್ಲಿ 200 ಕ್ಕೂ ಹೆಚ್ಚು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೇವು. ಇವೆಲ್ಲ ತಾಲ್ಲೂಕುಗಳು ತೀವ್ರ ತತ್ತರಿಸಿ ಹೋಗಿವೆ. ಈ ಕುರಿತು ಕೇಂದ್ರವು ರಾಜ್ಯಕ್ಕೆ ಯಾವುದೇ ಪರಿಹಾರ ಸಹಾಯವನ್ನು ಮಂಜೂರು ಮಾಡಿಲಿಲ್ಲ. ಆದ್ದರಿಂದ ರಾಜ್ಯದ ಹಕ್ಕುಗಳಿಗೆ ಹೋರಾಟ ಮಾಡುವ ಅನಿವಾರ್ಯತೆ ಎದುರಾಗಿದೆ ಎಂದರೆ.

More articles

Latest article