6 ತಿಂಗಳ ಒಳಗಾಗಿ ಕೆರೆಗಳ ಸಮೀಕ್ಷೆ ಮುಗಿಸಿ; ಸಿಎಂ ಸಿದ್ದರಾಮಯ್ಯ ಸೂಚನೆ

Most read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು. ಸಭೆಯಲ್ಲಿ ಸಣ್ಣ ನೀರಾವರಿ ಸಚಿವ ಎನ್. ಎಸ್.‌ ಬೋಸರಾಜು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.  ಬಾಕಿ ಉಳಿದಿರುವ 10 ಸಾವಿರ ಕೆರೆಗಳ ಸಮೀಕ್ಷೆ ಕಾರ್ಯವನ್ನು 6 ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯ ಮುಖ್ಯಾಂಶಗಳು:

•ರಾಜ್ಯದಲ್ಲಿ ಒಟ್ಟು 40,998 ಕೆರೆಗಳಿದ್ದು, ಇವುಗಳ ಪೈಕಿ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ 26,365ಕೆರೆಗಳು, ಸಣ್ಣ ನೀರಾವರಿಯಲ್ಲಿ 3,247, ಬಿಬಿಎಂಪಿ ವ್ಯಾಪ್ತಿಯಲ್ಲಿ  117 ಕೆರೆಗಳಿವೆ.

•ರಾಜ್ಯದಲ್ಲಿ 30 ಸಾವಿರ ಕೆರೆಗಳ ಸರ್ವೇ ಕಾರ್ಯವನ್ನು ಕಂದಾಯ ಇಲಾಖೆ ಈಗಾಗಲೇ ಪೂರ್ಣಗೊಳಿಸಿದೆ. ಉಳಿದಿರುವ 10,754 ಕೆರೆಗಳ ಸಮೀಕ್ಷೆ ಕಾರ್ಯವನ್ನು ಆರು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.

•ಕೆರೆ ಒತ್ತುವರಿ ತೆರವು ಕಾರ್ಯ ಬಾಕಿಯಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು.

•ಕೆರೆಗಳ ಸಂರಕ್ಷಣೆ ಕಾರ್ಯವನ್ನು ನರೇಗಾ ಅಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಬೇಕು.

•ಮೀನುಗಾರಿಕಾ ಇಲಾಖೆ ವತಿಯಿಂದ ಎಲ್ಲಾ ಕೆರೆಗಳಿಗೆ ಮೀನು ಮರಿಗಳನ್ನು ಬಿಡುವ ಕಾರ್ಯ ಮಾಡಿದರೆ ಆದಾಯ ಗಳಿಸಲು ಸಾಧ್ಯವಿದೆ. 

•ನಗರ ಪ್ರದೇಶದ ಕೆರೆಗಳು ಮಾತ್ರವಲ್ಲದೆ, ರಾಜ್ಯದ ಎಲ್ಲಾ ಕೆರೆಗಳ ಮಾಲಿನ್ಯದ ಮಟ್ಟವನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಪರಿಶೀಲಿಸಿ ನಿಯಮಿತವಾಗಿ ವರದಿ ಸಲ್ಲಿಸಬೇಕು.

More articles

Latest article