ಅವಹೇಳನಕಾರಿ ಪೋಸ್ಟ್‌; ಬಿಜೆಪಿ ಮುಖಂಡ ಅಮಿತ್ ಮಾಳವೀಯ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಎಫ್‌ಐಆರ್

ಕೋಲ್ಕತ್ತ: ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಂಚಿಕೊಂಡು ಸಮಾಜದಲ್ಲಿ ಕೋಮು ಸಾಮರಸ್ಯ ಕದಡಿದ ಆರೋಪದಡಿಯಲ್ಲಿ ಬಿಜೆಪಿ ಮುಖಂಡ ಅಮಿತ್ ಮಾಳವೀಯ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇಂತಹ ವಿಷಯವನ್ನು ಹಂಚಿಕೊಳ್ಳುವ ಮೂಲಕ ಮಾಳವೀಯ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅಪಮಾನಿಸಿದ್ದಾರೆ. ಆದ್ದರಿಂದ ಬಿಎನ್‌ಎಸ್‌ ಅಡಿಯಲ್ಲಿ ಮಾಳವೀಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಟಿಎಂಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ತನ್ಮಯ್ ಘೋಷ್ ನೀಡಿರುವ ದೂರು ಆಧರಿಸಿ ನರೇಂದ್ರಪುರ ಪೊಲೀಸ್ ಠಾಣೆಯಲ್ಲಿ ಮಾಳವೀಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಳವೀಯ ಅವರು ಡಿ.19ರಂದು ‘ಎಕ್ಸ್’ ವೇದಿಕೆಯಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಇದರಿಂದ  ಕೋಮು ಸಾಮರಸ್ಯದ ವಿರುದ್ಧ ಪ್ರಚೋದನೆ ಮತ್ತು ದೇಶದ ಸಾರ್ವಭೌಮತ್ವಕ್ಕೆ ಬೆದರಿಕೆ ಒಡ್ಡಿದೆ ಎಂದು ಅವರು ಆಪಾದಿಸಿದ್ದರು.

ಮಮತಾ ಬ್ಯಾನರ್ಜಿ ಅವರು 2026ರಲ್ಲಿ  ಮತ್ತೆ ಅಧಿಕಾರಕ್ಕೆ ಪಶ್ಚಿಮ ಬಂಗಾಳದ ಪರಿಸ್ಥಿತಿಯನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಮತ್ತು ರಾಜ್ಯದಲ್ಲಿ ಸಂಸ್ಕೃತಿ, ಮುಕ್ತ ಅಭಿವ್ಯಕ್ತಿ ಮತ್ತು ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದೂ ಅವರು ಟೀಕಿಸಿದ್ದರು.

More articles

Latest article

Most read