Tuesday, December 10, 2024

ಸಚಿವ ಮಧು ಬಂಗಾರಪ್ಪ ನಿಂದಿಸಿದ ವ್ಯಕ್ತಿ ವಿರುದ್ದ ಎಫ್‌ ಐಆರ್‌

Most read

ಶಿವಮೊಗ್ಗ,: ಸಾಮಾಜಿಕ ಜಾಲತಾಣಗಳಾದ ಎಕ್ಸ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಇಲ್ಲಿನ ವಿನೋಬನಗರ ನಿವಾಸಿ ಮೋಹಿತ್ ನರಸಿಂಹ ಮೂರ್ತಿ ಎಂಬಾತನ ವಿರುದ್ಧ  ವಿನೋಬನಗರ ಪೊಲೀಸ್‌ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ಮೋಹಿತ್‌ ಸಾಮಾಜಿಕ ಜಾಲತಾಣಗಳಲ್ಲಿ ಸಚಿವ ಮಧು ಬಂಗಾರಪ್ಪ  ಅವರನ್ನು ಕುರಿತು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಲು ನಿಮ್ಮಪ್ಪನ ಮನೆ ದುಡ್ಡಲ್ಲಿ ಏನಾದ್ರೂ ಅವರಿಗೆ ಶಿಕ್ಷಣ ಕೊಡ್ತೀರಾ ಎಂದು ಏಕವಚನದಲ್ಲಿ ನಿಂದಿಸಿದ್ದರು. ಈ ಸಂಬಂಧ ಆರೋಪಿ ಮೋಹಿತ್ ನರಸಿಂಹ ಮೂರ್ತಿ ವಿರುದ್ಧ ಪೊಲೀಸರು ರಾಜ್ಯ ಸರ್ಕಾರದ ಸಚಿವರು ಹಾಗೂ ಸಾಂವಿಧಾನಾತ್ಮಕ ಹುದ್ದೆಯಲ್ಲಿರುವ ವ್ಯಕ್ತಿಯನ್ನು ಉದ್ದೇಶಿಸಿ, ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ. ಸರ್ಕಾರದ ಘನತೆಗೆ ಧಕ್ಕೆ ತರುವಂತಹ, ಸರ್ಕಾರದ ಯೋಜನೆಯ ವಿರುದ್ಧ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿ, ಸಾರ್ವಜನಿಕರನ್ನು ಉದ್ರೇಕಿಸಿ ಸರ್ಕಾರದ ವಿರುದ್ಧ ದಂಗೆ ಏಳಿಸುವ ಹಾಗೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

More articles

Latest article