ಪ್ರಚೋದನಾತ್ಮಕ ಹೇಳಿಕೆ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್.ಐ.ಆರ್

ಮೊಬೈಲ್ ಅಂಗಡಿಯಲ್ಲಿ ಭಜನೆ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಎಂದು ಬಿಂಬಿಸಿ ಬುಧವಾರ ನಗರತಪೇಟೆಯಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಪೇಟೆ ನಿವಾಸಿ ಸಾವಿತ್ರಿಹಳ್ಳಿ ಎಂಬುವವರು ಬುಧವಾರ ನಡೆದ ಪ್ರತಿಭಟನೆಯಲ್ಲಿ ಸಂಸದರು ಮತೀಯ ಭಾವನೆಗಳನ್ನು ಕೆರಳಿಸುವಂತಹ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗದ ಸೂಚನೆ ಮೇರೆಗೆ ಠಾಣೆಯಲ್ಲಿ ಐಪಿಸಿ153(a), 295 (a) & ಸೆಕ್ಷನ್ 123 (3a) ಜನಪ್ರತಿನಿಧಿಗಳ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

More articles

Latest article

Most read