ರೈತ ಅತ್ಮಹತ್ಯೆ: ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ FIR

Most read

ಹಾವೇರಿ: ಪಹಣಿಯಲ್ಲಿ ವಕ್ಸ್ ಆಸ್ತಿ ಎಂಬುದು ನಮೂದಾಗಿದ್ದರಿಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ ಯುವ ಮುಖಂಡ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ತೇಜಸ್ವಿ ಸೂರ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎರಡು ಮಾಧ್ಯಮಗಳು ಜಮೀನಿನ ಜಮೀನಿನ ಪಹಣಿಯಲ್ಲಿ ವಕ್ಸ್ ಆಸ್ತಿ ಎಂಬುದು ನಮೂದಾಗಿದ್ದರಿಂದ ಹಾವೇರಿ ಜಿಲ್ಲೆಯ ಹಾರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಪ್ರಕಟಿಸಿದ್ದವು. ಈ ಸುದ್ದಿಯನ್ನು ಸಂಸದ ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದರು.

ಸುಳ್ಳು ಸುದ್ದಿಯನ್ನು ಪೋಸ್ಟ್ ಮಾಡಿದ್ದ ತೇಜ್ಸವಿ ಸೂರ್ಯ ಮತ್ತು ಎರಡು ಮಾಧ್ಯಮಗಳ ವಿರುದ್ಧ ಹಾವೇರಿ ಸೆನ್ ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ ಕಾಯಿದೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಮೊದಲ ಆರೋಪಿಯಾಗಿ ಮಾಡಲಾಗಿದೆ. ಎರಡೂ ಮಾಧ್ಯಮಗಳ ಮುಖ್ಯಸ್ಥರನ್ನು ನಂತರದ ಆರೋಪಿಗಳನ್ನಾಗಿ ಮಾಡಲಾಗಿದೆ. ಮೂವರಿಗೂ ಸದ್ಯದಲ್ಲೇ ನೋಟಿಸ್ ನೀಡಿ ವಿಚಾರಣೆ ನಡೆಸಿ ಮುಂದಿನ ಕ್ರಮ ಜರುಗಿಸಲಾಗುವುದು. ವಿವಿಧ ಗುಂಪುಗಳ ನಡುವೆ ದ್ವೇಷ ಬಿತ್ತುವ ಹಾಗೂ ದ್ವೇಷ ಉಂಟು ಮಾಡಲು ಪ್ರಚೋದಿಸುವ ಸುಳ್ಳು ಸುದ್ದಿ (ಬಿಎನ್ಎಸ್ 353 (2) ಹರಿಬಿಟ್ಟ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಾಲ್ಕು ಎಕರೆ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರಿಂದ ಮನನೊಂದು ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಕ್ಫ್ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಎರಡೂ ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಪ್ರಕಟಿಸಿದ್ದವು.

More articles

Latest article