ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಿದವರ ಮೇಲೆ ಎಫ್‌ಐಆರ್ ದಾಖಲು

ಆರ್.ಆರ್ ನಗರ ವಲಯ ಹೇರೋಹಳ್ಳಿ ವಾರ್ಡ್ನ ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಅನಧಿಕೃತವಾಗಿ ಹಾಗೂ ಪಾಲಿಕೆ ವತಿಯಿಂದ ಯಾವುದೇ ಅನುಮತಿ ಪಡೆಯದೆ ಕೊಳವೆ ಬಾವಿ ಕೊರೆಸುತ್ತಿರುವವರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.

ವೀರಭದ್ರೇಶ್ವರ ನಗರ ಓಂ ಸಾಯಿ ಪಬ್ಲಿಕ್ ಮುಖ್ಯ ರಸ್ತೆಯಲ್ಲಿ ಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ 3ನೇ ಅಕ್ಟೋಬರ್ 2024 ರಿಂದ 4ನೇ ಅಕ್ಟೋಬರ್ 2024ರ ಸಂಜೆಯವರೆಗೆ ಕೊಳವೆ ಬಾವಿ ಕೊರೆಸುವ ಕಾರ್ಯ ನಡೆದಿರುತ್ತದೆ. ಈ ಸಂಬಂಧ ಪಾಲಿಕೆಗೆ ದೂರು ಬಂದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

ಸಾರ್ವಜನಿಕ ರಸ್ತೆಯನ್ನು ಅಗೆದು ಹಾಳು ಮಾಡಿ ಕೊಳವೆ ಬಾವಿಯನ್ನು ಪಾಲಿಕೆಯ ರಸ್ತೆಯಲ್ಲಿ ಕೊರೆಸುತ್ತಿದ್ದು, ಸಾರ್ವಜನಿಕರಿಗಾಗಿ ನಿರ್ಮಾಣ ಮಾಡಿದ ಡಾಂಬರು ರಸ್ತೆಯನ್ನು ಹಾಳುಮಾಡಿರುತ್ತಾರೆ. ಈ ಸಂಬಂಧ 4ನೇ ಅಕ್ಟೋಬರ್ 2024ರಂದು ಪಾಲಿಕೆ ಅಧಿಕಾರಿಯು ಮಾಗಡಿ ಮುಖ್ಯ ರಸ್ತೆಯ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಳವೆ ಬಾವಿ ಕೊರೆಸಿದವರ ಹಾಗೂ ಬೋರ್‌ವೆಲ್ ಕೊರೆಯುವ ವಾಹನದ ಮೇಲೆ ಕಾನೂನ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ.

ಮುಂದುವರಿದು, ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಥಮ ವರ್ತಮಾನ ವರದಿ(ಎಫ್.ಐ.ಆರ್) ದಾಖಲಿಸಿಕೊಳ್ಳಲಾಗಿದ್ದು, ಕೂಡಲೆ ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಜರುಗಿಸಲು ಪೊಲೀಸ್ ಠಾಣೆಯಲ್ಲಿ ಕೋರಲಾಗಿದೆ. ಅಲ್ಲದೆ ಅನಧಿಕೃತವಾಗಿ ರಸ್ತೆಯಲ್ಲಿ ಕೊಳವೆ ಬಾವಿ ಕೊರೆದವರಿಗೆ ದಂಡ ವಿಧಿಸಲು ಕೂಡಾ ಕ್ರಮ ಕೈಗೊಳ್ಳಲಾಗುತ್ತಿದೆ.

More articles

Latest article

Most read