ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್: ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್ ದಾಖಲು

ಶಿಮ್ಲಾ: ಗಾಂಧಿ ಕುಟುಂಬವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ವಿರುದ್ಧ ಹಿಮಾಚಲ ಪ್ರದೇಶ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಕಂಗನಾ ಅವರ ಹೇಳಿಕೆಗಳು ಪ್ರಚೋದನಕಾರಿ ಸ್ವರೂಪ ಹೊಂದಿದ್ದು, ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಸಾಧ್ಯತೆಯಿದೆ ಎಂದು ಆರೋಪಿಸಿ ಸಲ್ಲಿಸಲಾದ ದೂರಿನ ಆಧಾರದ ಮೇಲೆ ನವೆಂಬರ್ 13ರ ಶುಕ್ರವಾರ ಶಿಮ್ಲಾದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿಮ್ಲಾ ನಿವಾಸಿ, ನಿವೃತ್ತ ಕ್ಯಾಪ್ಟನ್ ಅತುಲ್ ಶರ್ಮಾ ಎಂಬುವವರು ಈ ಸಂಬಂಧ ದೂರು ನೀಡಿದ್ದಾರೆ. ನವೆಂಬರ್ 10ರಂದು ಕಂಗನಾ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗೂ ಅವರ ಪುತ್ರರಾದ ಸಂಜಯ್ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸಾವಿನ ಕುರಿತು ಅತ್ಯಂತ ಪ್ರಚೋದನಕಾರಿ ರೀತಿಯ ಅನುಮಾನಾಸ್ಪದ ಹೇಳಿಕೆಗಳನ್ನು ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 196(1)(b), 353(2) ಮತ್ತು 356(2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿರುವುದನ್ನು ಶಿಮ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಸಿಂಗ್ ದೃಢಪಡಿಸಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸೋನಿಯಾ ಗಾಂಧಿ ವಿರುದ್ಧದ ಹೇಳಿಕೆಗೂ ಆಕ್ಷೇಪ

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಪೋಸ್ಟ್‌ನಲ್ಲಿ ‘ನಿಗೂಢ ವಿದೇಶಿ ಪ್ರಜೆ’ ಎಂಬ ಅರ್ಥ ಬರುವ ರೀತಿಯಲ್ಲಿ ಉಲ್ಲೇಖಿಸಿರುವುದಕ್ಕೂ ದೂರುದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿದೇಶದಲ್ಲಿರುವ ಕೆಫೆಯೊಂದಕ್ಕೆ ಸೋನಿಯಾ ಗಾಂಧಿ ಆಗಮಿಸಿದ ಬಳಿಕ ಗಾಂಧಿ ಕುಟುಂಬದ ಸದಸ್ಯರು ಒಬ್ಬೊಬ್ಬರಾಗಿ ಸಾವನ್ನಪ್ಪಿದರು. ಅಂತಿಮವಾಗಿ ಅವರು ಸರ್ಕಾರದ ಉನ್ನತ ಸ್ಥಾನಕ್ಕೆ ತಲುಪಿದರು ಎಂಬರ್ಥ ಬರುವಂತೆ ಪೋಸ್ಟ್‌ನಲ್ಲಿ ಬಿಂಬಿಸಲಾಗಿದೆ. ಈ ಹೇಳಿಕೆಯೊಂದಿಗೆ ‘ಎಷ್ಟು ಅನುಕೂಲಕರ!’ (How convenient) ಎಂಬ ವ್ಯಂಗ್ಯವನ್ನೂ ಮಾಡಲಾಗಿದೆ ಎಂದು ಅತುಲ್ ಶರ್ಮಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದಲ್ಲದೆ, ಸಂಜಯ್ ಗಾಂಧಿ ಅವರ ಸಾವಿನ ಬಳಿಕ ಮೇನಕಾ ಗಾಂಧಿ ಕುಟುಂಬದ ನಿವಾಸವನ್ನು ತೊರೆದ ಘಟನೆಯನ್ನೂ ಕಂಗನಾ ತಮ್ಮ ಪೋಸ್ಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಈ ಪೋಸ್ಟ್ ಕೇವಲ ರಾಜಕೀಯ ಟೀಕೆಗೆ ಸೀಮಿತವಾಗಿಲ್ಲ. ಬದಲಾಗಿ ಸಾರ್ವಜನಿಕರಲ್ಲಿ ದ್ವೇಷ ಮತ್ತು ವೈಷಮ್ಯವನ್ನು ಹೆಚ್ಚಿಸುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಶಾಂತಿಯನ್ನು ಕದಡುವ ಸಾಧ್ಯತೆಯಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ತಪ್ಪು ಮತ್ತು ದಾರಿತಪ್ಪಿಸುವ ಮಾಹಿತಿಯನ್ನು ಹರಡುವ ಮೂಲಕ ಜನರಲ್ಲಿ ಭೀತಿ ಮೂಡಿಸುವ ಹಾಗೂ ವಿವಿಧ ಗುಂಪುಗಳ ನಡುವೆ ದ್ವೇಷ ಬೆಳೆಸುವ ಪ್ರಯತ್ನವೂ ನಡೆದಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಗುರುವಾರ ರಾತ್ರಿ 7.51ಕ್ಕೆ ಇ-ಮೇಲ್ ಮೂಲಕ ಪೊಲೀಸ್ ಮಹಾನಿರ್ದೇಶಕರಿಗೆ ದೂರು ಸಲ್ಲಿಸಿರುವ ಅತುಲ್ ಶರ್ಮಾ, ತಕ್ಷಣ ಎಫ್‌ಐಆರ್ ದಾಖಲಿಸಿ ಕಂಗನಾ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಕುರಿತು ಕಾಲಮಿತಿಯೊಳಗೆ ಸೈಬರ್ ಫೊರೆನ್ಸಿಕ್ ತನಿಖೆ ನಡೆಸುವಂತೆ ಮನವಿ ಮಾಡಿದ್ದರು.

More articles

Latest article

Most read