ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೇದೆಯೊಬ್ಬರಿಗೆ ನಿಂದಿಸಿದ್ದ ಇಬ್ಬರ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಹೊಂಗಸಂದ್ರದ ನಿವಾಸಿಗಳಾದ ಲೋಕೇಶ್ ಹಾಗೂ ರವಿ ವಿರುದ್ಧ ಪ್ರಕರಣ ದಾಖಸಿಕೊಳ್ಳಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ವಾಣಿಶ್ರೀ ಅವರು ಹುಳಿಮಾವು ಸಾಯಿಬಾಬಾ ದೇವಸ್ಥಾನದ ಜಂಕ್ಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ಸಂದರ್ಭದಲ್ಲಿ ವಾಹನ ನಿಲ್ಲಿಸುವಂತೆ ವಾಣಿಶ್ರೀ ಅವರು ಆರೋಪಿಗಳಿಗೆ ಸೂಚನೆ ನೀಡಿದ್ದರು. ಆಗ ಆರೋಪಿಗಳು ವಾಣಿಶ್ರೀ ಅವರನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದರು. ವಾಣಿಶ್ರೀ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.