ಅಗ್ನಿ ಅವಘಡ; 6 ಮಂದಿ ಸಜೀವ ದಹನ

Most read

ಶ್ರೀನಗರ : ಮನೆಯಲ್ಲಿ ಮಲಗಿದ್ದ 6 ಮಂದಿ ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದ ಆರು ಮಂದಿ ಬೆಂಕಿಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇತರ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರಲ್ಲಿ ನಿವೃತ್ತ ಪೊಲೀಸ್‌ ಸೂಪರಿಂಟೆಂಡೆಂಟ್‌ ಮತ್ತು ಅವರ ಆರು ವರ್ಷದ ಮೊಮ್ಮಗನೂ ಸೇರಿದ್ದಾನೆ. ಬುಧವಾರ ಬೆಳಗ್ಗೆ 2.30ರ ವೇಳೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಅತಿಯಾದ ಹೊಗೆ ತುಂಬಿಕೊಂಡಿದ್ದರಿಂದ ಉಸಿರಾಟಕ್ಕೆ ತೊಂದರೆಯಾಗಿ ಅಸುನೀಗಿದ್ದಾರೆ.

ಬೆಂಕಿ ಹೊತ್ತಿಕೊಂಡಿರುವ ಸುದ್ದಿ ಲಭ್ಯವಾಗುತ್ತಿದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಂತ್ರಸ್ತರನ್ನು ಆಸ್ಪತ್ರೆಗಳಿಗೆ ಕರೆದೊಯ್ದು ದಾಖಲಿಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಗ್ನಿ ಅವಘಡ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

More articles

Latest article