ಕುಂಭಮೇಳದಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ 2 ಕಾರು

Most read

ಪ್ರಯಾಗ್‌ರಾಜ್‌: ವಿದ್ಯುತ್ ಶಾರ್ಟ್‌ ಸರ್ಕೀಟ್‌ನಿಂದಾಗಿ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾ, ಯಮುನಾ ಹಾಗೂ ಪೌರಾಣಿಕ ಸರಸ್ವತಿ ನದಿಯ ಸಂಗಮದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಎರಡು ಕಾರುಗಳು ಹೊತ್ತಿ ಉರಿದಿವೆ.

ವಾರಾಣಸಿ ಕಡೆಯಿಂದ ಕುಂಭ ಮೇಳ ನಡೆಯುವ ಪ್ರದೇಶಕ್ಕೆ ಹೋಗುವ ದಾರಿಯಲ್ಲಿ ಕಾರಿಗೆ ಬೆಂಕಿ ತಗುಲಿದೆ. ಅದರ ಪಕ್ಕದಲ್ಲೇ ಇದ್ದ ಮತ್ತೊಂದು ಕಾರಿಗೂ ಬೆಂಕಿ ತಗುಲಿದ ಪರಿಣಾಮ ಎರಡೂ ಕಾರುಗಳು ಸುಟ್ಟು ಕರಕಲಾಗಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬ್ಬಂದಿ ಕಾರಿನೊಳಗಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆತಂದು ರಕ್ಷಿಸಿದ್ಧಾರೆ. ಹೀಗಾಗಿ ಯಾವುದೇ ಸಾವು, ನೋವು ಸಂಭವಿಸಿರುವ ವರದಿಯಾಗಿಲ್ಲ.

ಕುಂಭ ಮೇಳದಲ್ಲಿ ಹಾಕಲಾಗಿರುವ ಟೆಂಟ್‌ಗಳಲ್ಲಿ 18 ಟೆಂಟ್‌ಗೆ ಬೆಂಕಿ ತಗುಲಿತ್ತು. ಗುಡಿಸಿಲೊಂದರ ಮೇಲ್ಚಾವಣಿಗೆ ಹಾಕಿದ್ದ ಹುಲ್ಲಿಗೆ ಬೆಂಕಿ ತಗುಲಿತ್ತು. ಕ್ಷಣಮಾತ್ರದಲ್ಲಿ ಇದು ಸುತ್ತಲೂ ವ್ಯಾಪಿಸಿತ್ತು. ಇದರ ಪರಿಣಾಮ ಸೆಕ್ಟರ್‌ 19ರಲ್ಲಿ 18 ಗುಡಿಸಲುಗಳು ಸುಟ್ಟು ಭಸ್ಮವಾದವು. ಅಗ್ನಿಶಾಮಕ ದಳದ ಸಿಬ್ಬಂದಿ ತ್ವರಿತ ಕಾರ್ಯಾಚರಣೆ ಮಾಡಿದ ಪರಿಣಾಮ ಯಾವುದೇ ಸಾವು, ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

More articles

Latest article