ನೆಲಮಂಗಲ ಸಮೀಪ ಶೆಲ್‌ ಗೋದಾಮಿನಲ್ಲಿ ಅಗ್ನಿ ದುರಂತ; ಬೆಂಕಿ ನಂದಿಸಲು ಹರಸಾಹಸಪಡುತ್ತಿರುವ ಅಗ್ನಿಸಾಮಕ ಸಿಬ್ಬಂದಿ; ಕೋಟ್ಯಂತರ ರೂ. ನಷ್ಟ

Most read

ನೆಲಮಂಗಲ: ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತುರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಮಾರನಹಳ್ಳಿ ಗ್ರಾಮದಲ್ಲಿ ನೆಡೆದಿದೆ.

ಕೃಷ್ಣಪ್ಪ ಎಂಬುವರಿಗೆ ಸೇರಿದ 33 ಸಾವಿರ ಚದುರ ಅಡಿ ವಿಸ್ತೀರ್ಣವುಳ್ಳ ಬೃಹತ್ ಗೋದಾಮು ಬೆಂಕಿಗೆ ಆಹುತಿಯಾಗಿದ್ದು, ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಈ ಸಂಬಂಧ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನೆಡೆಸುತ್ತಿದ್ದಾರೆ.

ಗೋದಾಮಿನಲ್ಲಿ ಶೆಲ್ ಕಂಪನಿಗೆ ಸೇರಿದ ಆಯಿಲ್ ಉತ್ಪನ್ನಗಳು ಇದ್ದವು ಎಂದು ತಿಳಿದು ಬಂದಿದೆ. 10-12 ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ನೆಲಮಂಗಲ, ಪೀಣ್ಯ ಹೆಬ್ಬಾಳ, ರಾಜಾಜಿನಗರ, ಥಣಿಸಂದ್ರ, ಸುಂಕದಕಟ್ಟೆ ಮತ್ತು ಯಶವಂತಪುರ ಅಗ್ನಿಶಾಮಕ ಠಾಣೆಗಳಿಂದ ವಾಹನಗಳು ಆಗಮಿಸಿವೆ.  ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸುಮಾರು 60-70 ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಆಯಿಲ್ ಉತ್ಪನ್ನವಾದ ಕಾರಣ ಬೆಂಕಿ ನಂದಿಸುವ ಕೆಲಸ ಸವಾಲಿನದ್ದಾಗಿದೆ. ಅಗ್ನಿ ದುರಂತದ ತೀವ್ರತೆ ಎಷ್ಟಿತ್ತೆಂದರೆ ಹೊರಸೂಸುತ್ತಿದ್ದ ಭಾರಿ ಪ್ರಮಾಣದ ಹೊಗೆ ಗಗನವನ್ನು ಚುಂಬಿಸುವಂತಿತ್ತು.

 ದುರಂತದಲ್ಲಿ ಕೋಟ್ಯಂತರ ರೂಪಾಯಿ ನಷ್ಟವಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More articles

Latest article