ಐಪಿಎಲ್  ಆಟಗಾರರ ವರ್ಗಾವಣೆ: ಪಂಜಾಬ್ ಕಿಂಗ್ಸ್‌ಗೆ ಹಾರ್ದಿಕ್ ಪಾಂಡ್ಯ, ಮುಂಬೈ ಇಂಡಿಯನ್ಸ್‌ಗೆ ಅರ್ಷದೀಪ್ ಸಿಂಗ್!

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲೇ ಅತಿದೊಡ್ಡ ಆಟಗಾರರ ವರ್ಗಾವಣೆ ನಡೆದಿದೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾಗೂ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು 18 ಕೋಟಿ ರೂಪಾಯಿಗೆ ಪಂಜಾಬ್ ಕಿಂಗ್ಸ್ ತಂಡಕ್ಕೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಪ್ರತಿಯಾಗಿ ಪಂಜಾಬ್ ತಂಡದ ವೇಗದ ಬೌಲರ್ ಅರ್ಷದೀಪ್ ಸಿಂಗ್ ಅವರು ಮುಂಬೈ ಇಂಡಿಯನ್ಸ್ ತಂಡವನ್ನು ಸೇರಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಈ ಆಟಗಾರರ ವಿನಿಮಯವನ್ನು ಐಪಿಎಲ್ ಆಡಳಿತ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ. ಹಾರ್ದಿಕ್ ಪಾಂಡ್ಯ ಅವರ ವೇತನವನ್ನು ಈ ಹಿಂದೆ ಇದ್ದ 16.35 ಕೋಟಿ ರೂಪಾಯಿಯಿಂದ 18 ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ. ಇತ್ತ ಅರ್ಷದೀಪ್ ಸಿಂಗ್ ಅವರು ತಮ್ಮ ಹಿಂದಿನ 18 ಕೋಟಿ ರೂಪಾಯಿ ಮೊತ್ತದಲ್ಲೇ ಮುಂಬೈ ತಂಡಕ್ಕೆ ಸೇರ್ಪಡೆಯಾಗಲಿದ್ದಾರೆ.

ಈ ವರ್ಗಾವಣೆಯೊಂದಿಗೆ ಮುಂಬೈ ಇಂಡಿಯನ್ಸ್ ತಂಡದೊಂದಿಗಿನ ಹಾರ್ದಿಕ್ ಪಾಂಡ್ಯ ಅವರ ಎರಡನೇ ಅವಧಿ ಅಂತ್ಯಗೊಂಡಿದೆ. 2015ರಲ್ಲಿ ಮೊದಲ ಬಾರಿಗೆ ಮುಂಬೈ ತಂಡಕ್ಕೆ ಸೇರ್ಪಡೆಯಾಗಿದ್ದ ಅವರು, 2015, 2017, 2019 ಮತ್ತು 2020ರಲ್ಲಿ ತಂಡ ಐಪಿಎಲ್ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಮುಂಬೈ ತಂಡದೊಂದಿಗೆ ಏಳು ಋತುಗಳನ್ನು ಕಳೆದ ಬಳಿಕ 2022ರಲ್ಲಿ 15 ಕೋಟಿ ರೂಪಾಯಿಗೆ ಗುಜರಾತ್ ಟೈಟನ್ಸ್ ತಂಡವನ್ನು ಸೇರಿದ್ದರು. ತಂಡದ ನಾಯಕತ್ವ ವಹಿಸಿಕೊಂಡಿದ್ದ ಹಾರ್ದಿಕ್, ಚೊಚ್ಚಲ ಆವೃತ್ತಿಯಲ್ಲೇ ಗುಜರಾತ್‌ಗೆ ಪ್ರಶಸ್ತಿ ತಂದುಕೊಟ್ಟಿದ್ದರು. 2023ರಲ್ಲಿಯೂ ತಂಡವನ್ನು ಫೈನಲ್‌ಗೆ ಮುನ್ನಡೆಸಿದ್ದರು.

2024ರಲ್ಲಿ ಮತ್ತೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ ಹಾರ್ದಿಕ್, ರೋಹಿತ್ ಶರ್ಮಾ ಬದಲಿಗೆ ನಾಯಕತ್ವ ವಹಿಸಿಕೊಂಡಿದ್ದರು. ಆದರೆ, ಅವರ ನೇಮಕಕ್ಕೆ ತಂಡದ ಅಭಿಮಾನಿಗಳ ಒಂದು ವರ್ಗದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಮೊದಲ ಋತುವಿನಲ್ಲಿ ಹಲವು ಬಾರಿ ಅಭಿಮಾನಿಗಳಿಂದ ಹಾರ್ದಿಕ್ ಟೀಕೆ ಹಾಗೂ ಬೂಸಾಟಕ್ಕೆ ಗುರಿಯಾಗಿದ್ದರು.

2026ರ ಐಪಿಎಲ್ ಋತುವಿನಲ್ಲಿ ಮುಂಬೈ ತಂಡದ ಪ್ರದರ್ಶನವೂ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. 14 ಪಂದ್ಯಗಳಲ್ಲಿ ಕೇವಲ ನಾಲ್ಕು ಗೆಲುವುಗಳನ್ನು ದಾಖಲಿಸಿತ್ತು. ಫಿಟ್‌ನೆಸ್ ಸಮಸ್ಯೆಯಿಂದಾಗಿ ಟೂರ್ನಿಯ ಕೊನೆಯ ಹಂತದ ಕೆಲವು ಪಂದ್ಯಗಳಿಂದ ಹಾರ್ದಿಕ್ ದೂರ ಉಳಿದಿದ್ದರು.

ಮುಂಬೈ ತಂಡದ ಡ್ರೆಸ್ಸಿಂಗ್ ರೂಮ್‌ನಲ್ಲಿಯೂ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡಿದ್ದವು ಎಂದು ಪಿಟಿಐ ವರದಿ ತಿಳಿಸಿದೆ. ಮಾಜಿ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಮತ್ತು ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಸೇರಿದಂತೆ ಹಿರಿಯ ಆಟಗಾರರ ನಾಯಕತ್ವದ ಪಾತ್ರದ ಬಗ್ಗೆ ಚರ್ಚೆಗಳು ನಡೆದಿದ್ದವು. ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ ನಿರ್ಧಾರವೂ ವಿವಾದಕ್ಕೆ ಕಾರಣವಾಗಿತ್ತು.

ಆದಾಗ್ಯೂ, ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ಪ್ರಮುಖ ಆಲ್‌ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ. ಇದುವರೆಗೆ 162 ಪಂದ್ಯಗಳನ್ನಾಡಿರುವ ಅವರು 146.28 ಸ್ಟ್ರೈಕ್‌ರೇಟ್‌ನಲ್ಲಿ 2,955 ರನ್ ಗಳಿಸಿದ್ದು, 82 ವಿಕೆಟ್‌ಗಳನ್ನು ಪಡೆದಿದ್ದಾರೆ.

ಇನ್ನು, ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಎಂಟು ಋತುಗಳ ಕಾಲ ಪಂಜಾಬ್ ಕಿಂಗ್ಸ್ ತಂಡದ ಪರ ಆಡಿದ ಬಳಿಕ ಇದೀಗ ಮುಂಬೈ ಇಂಡಿಯನ್ಸ್ ಸೇರಲಿದ್ದಾರೆ. 2019ರಲ್ಲಿ ಐಪಿಎಲ್‌ಗೆ ಪದಾರ್ಪಣೆ ಮಾಡಿದ್ದ ಅವರು, ಪಂಜಾಬ್ ತಂಡದ ಪರ 96 ಪಂದ್ಯಗಳಲ್ಲಿ 111 ವಿಕೆಟ್ ಪಡೆದು ತಂಡದ ಸಾರ್ವಕಾಲಿಕ ಗರಿಷ್ಠ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

2025ರ ಐಪಿಎಲ್ ಋತುವಿನಲ್ಲಿ 21 ವಿಕೆಟ್ ಪಡೆದಿದ್ದ ಅರ್ಷದೀಪ್, 2026ರ ಆವೃತ್ತಿಯಲ್ಲಿ 14 ವಿಕೆಟ್ ಕಬಳಿಸಿದ್ದರು. ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿಯೂ ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಆಗಿರುವ ಅವರು, 104 ಪಂದ್ಯಗಳಲ್ಲಿ 151 ವಿಕೆಟ್ ಪಡೆದಿದ್ದಾರೆ.

ಇದಕ್ಕೂ ಮೊದಲು ಈ ವರ್ಷದ ಆರಂಭದಲ್ಲಿ ಮತ್ತೊಂದು ಪ್ರಮುಖ ಆಟಗಾರರ ವಿನಿಮಯ ನಡೆದಿತ್ತು. ರಾಜಸ್ಥಾನ್ ರಾಯಲ್ಸ್ ತಂಡದ ಸಂಜು ಸ್ಯಾಮ್ಸನ್ ಅವರನ್ನು 18 ಕೋಟಿ ರೂಪಾಯಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ವರ್ಗಾವಣೆ ಮಾಡಲಾಗಿತ್ತು. ಇದಕ್ಕೆ ಪ್ರತಿಯಾಗಿ ಚೆನ್ನೈ ತಂಡವು 14 ಕೋಟಿ ರೂಪಾಯಿ ಮೌಲ್ಯದ ರವೀಂದ್ರ ಜಡೇಜಾ ಹಾಗೂ 2.4 ಕೋಟಿ ರೂಪಾಯಿ ಮೌಲ್ಯದ ಸ್ಯಾಮ್ ಕರನ್ ಅವರನ್ನು ರಾಜಸ್ಥಾನ್ ತಂಡಕ್ಕೆ ನೀಡಿತ್ತು.

ಹಾರ್ದಿಕ್ ಪಾಂಡ್ಯ ಮತ್ತು ಅರ್ಷದೀಪ್ ಸಿಂಗ್ ನಡುವಿನ ಈ ವಿನಿಮಯವು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದೊಡ್ಡ ಆಟಗಾರರ ವರ್ಗಾವಣೆಯಾಗಿ ದಾಖಲಾಗಿದೆ.

More articles

Latest article

Most read