ಮೀನು ಕಳವು ಆರೋಪ, ಮಹಿಳೆಗೆ ಥಳಿತ; ತನಿಖೆಗೆ ಸಿಎಂ ಸೂಚನೆ

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌  ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ  ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು ಎಂದು ಹೇಳಿದ್ದಾರೆ.

ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ. ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ ಎಂದಿದ್ದಾರೆ.

ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ.ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಅವರು ಎಕ್ಸ್‌ ಮೂಲಕ ಮಾಹಿತಿ ನೀಡಿದ್ದಾರೆ.

More articles

Latest article

Most read