ಹೊಸ ವರ್ಷಾಚರಣೆ ನೆಪದಲ್ಲಿ ದುರ್ವರ್ತನೆ ತೋರಿದರೆ ಶಿಕ್ಷೆ ಖಚಿತ: ಡಿಕೆ ಶಿವಕುಮಾರ್‌

ಬೆಂಗಳೂರು: ಹೊಸ ವರ್ಷಾಚರಣೆ ನೆಪದಲ್ಲಿ ದುರ್ವರ್ತನೆ ತೋರಿದರೆ ಶಿಕ್ಷೆ ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕಾನೂನು ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕ್ರಮ ಕೈಗೊಳ್ಳಲಾಗುವುದು. ಇದನ್ನು ಮನವಿಯಾಗಿಯಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ಬೆಂಗಳೂರು ನಗರಾದಾದ್ಯಂತ 10 ಸಾವಿರಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಸಂಚಾರ ಮಾಡುವ ಪ್ರತಿಯೊಬ್ಬರ ಚಲನವಲನಗಳ ಮೇಲೆ ಕಣ್ಣಿಡಲಾಗುವುದು. ಹೊಸ ವರ್ಷಾಚರಣೆ ವೇಳೆ ರಾಜ್ಯದ ಗೌರವ ಹಾಗೂ ಗಾಂಭೀರ್ಯ ಕಾಪಾಡಬೇಕು ಎಂದು ಅವರು ಮನವಿ ಮಾಡಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣ ರಾಜ್ಯ ಸರ್ಕಾರ ಏಳು ದಿನ ಶೋಕಾಚಾರಣೆ ಘೋಷಣೆ ಮಾಡಿದ್ದು, ಕೇವಲ ಸರ್ಕಾರಿ ಕಾರ್ಯಕ್ರಮಗಳನ್ನು ಮಾತ್ರ ನಡೆಸುವಂತಿಲ್ಲ. ಅದರ ಹೊರತಾಗಿ ಖಾಸಗಿ ಕಾರ್ಯಕ್ರಮಗಳನ್ನು ಆಯೋಜಿಸಲು ಯಾವುದೇ ಅಭ್ಯಂತರವಿಲ್ಲಮತ್ತು ಖಾಸಗಿ ಕಾರ್ಯಕ್ರಮಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವೂ ಇಲ್ಲ. ಆದ್ದರಿಂದ ಖಾಸಗಿಯಾಗಿ ಹೊಸ ವರ್ಷಾಚರಣೆ ಮಾಡುವವರು ಮಾಡಿಕೊಳ್ಳಬಹುದು ಎಂದರು. ಒಟ್ಟಾರೆ ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆಗೆ ಧಕ್ಕೆಯಾಗಬಾರದು. ಬಿಬಿಎಂಪಿ ಹಾಗೂ ಪೊಲೀಸರು ವ್ಯಾಪಾರಸ್ಥರಿಗೆ ಮಾರ್ಗಸೂಚಿ ನೀಡಲಿದ್ದಾರೆ. ಕಾಲಾವಕಾಶ ವಿಸ್ತರಣೆ ಮಾಡಿದ್ದರೂ ಯಾರೊಬ್ಬರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲ ಎಂದು ಡಿಕೆಶಿ ತಿಳಿಸಿದರು.

More articles

Latest article

Most read