ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿಗೆ ಯಾವುದೇ ರಾಜಿಯಿಲ್ಲ : ಕೃಷ್ಣ ಬೈರೇಗೌಡ

ಬೆಂಗಳೂರು : ಫುಟ್‌ಪಾತ್‌ ಒತ್ತುವರಿ ತೆರವಿಗೆ ಯಾವುದೇ ರಾಜಿ ಮಾಡಿಕೊಳ್ಳದೆ ಮುಂದುವರೆಯಲಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳೀದ್ದಾರೆ.

ಇಂದು ಬೀದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿ ಪದಾಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಬಡವರ ಪರವಾಗಿ ಸದಾ ಇರುತ್ತದೆ, ನಾಗರಿಕರು ಓಡಾಡಲು ಸುಗಮ ಮಾರ್ಗ ನಿರ್ಮಿಸಲು ನಾವು ಈ ಕ್ರಮ ಕೈಗೊಳ್ಳುತ್ತಿದ್ದೇವೆ. ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಜೀವನ ನಡೆಯಬೇಕೆನ್ನುವುದೇ ನಮ್ಮ ಆಶಯ. ಸುಪ್ರಿಂ ಕೋರ್ಟ್ ಆದೇಶವನ್ನು ನಾವು ಪಾಲಿಸಿಕೊಂಡು ಪಾದಚಾರಿ ಮಾರ್ಗದಲ್ಲಿರುವೆಲ್ಲಾ ಒತ್ತುವರಿಗಳನ್ನು ತೆರವುಗೊಳಿಸುತ್ತಿದ್ದೇವೆ. ಪಾದಚಾರಿ ಮಾರ್ಗಗಳಲ್ಲಿ ಜನ ಓಡಾಡಲು ಸುಗಮ ಮಾರ್ಗವಿರಬೇಕು. ಅದರಲ್ಲಿ ಯಾವುದೇ ರಾಜಿಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  • ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಬೀದಿ ಬದಿ ವ್ಯಾಪಾರಿಗಳ ಸಹಕಾರ ಪ್ರಮುಖವಾಗಿ ಬೇಕಿದೆ. ನಗರದ ಪ್ರಮುಖ ರಸ್ತೆಗಳಾದ 1,500 ಕಿ.ಮೀ ರಸ್ತೆಗಳಲ್ಲಿ ವ್ಯಾಪಾರ ಮಾಡಬೇಕಿ. ಉಳಿದ ಶೇ. 80-90 ರಷ್ಟು ವಾರ್ಡ್ ರಸ್ತೆಗಳಲ್ಲಿ ವ್ಯಾಪಾರ ಮಾಡಿಕೊಳ್ಳಲು ಅವಕಾಶವಿದೆ. ಅದಕ್ಕೆ ಪಾಲಿಕೆ ಸಂಪೂರ್ಣ ಸಹಕಾರ ನೀಡಲಿದೆ.
  • ನಗರದಲ್ಲಿ ನಿನ್ನೆಯವರೆಗೆ 430 ಕಿ.ಮೀ ಒತ್ತುವರಿ ತೆರವು ಮಾಡಲಾಗಿದೆ. ಇದನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ.
  • ಪಾದಚಾರಿ ಮಾರ್ಗಗಳಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಮಾತ್ರವಲ್ಲದೆ, ಶಾಪ್ಸ್, ಪೆಟ್ಟಿ ಅಂಗಡಿಗಳು, ತಳ್ಳುವ ಗಾಡಿಗಳು, ಶೀಟ್‌ಗಳು, ಮೇಲ್ಚಾವಣಿ, ಕೆನೋಪಿ, ಮೆಟ್ಟಿಲುಗಳು ರ‍್ಯಾಂಪ್‌, ತಡೆಗೋಡೆಗಳು, ಜಾಹೀರಾತು, ನಾಮಫಲಕಗಳು, ತಾತ್ಕಾಲಿಕ, ಶಾಶ್ವತ ಶೆಡ್ ಗಳುನ್ನು ಕೂಡಾ ತೆರವುಗೊಳಿಸಲಾಗುತ್ತಿದೆ.

  • ಮುಂದಿನ ದಿನಗಳಲ್ಲಿ ಪಾರ್ಕಿಂಗ್, ಗಾರ್ಡನ್ ಸೇರಿದಂತೆ ಪಾದಚಾರಿ ಮಾರ್ಗಗಳಲ್ಲಿರುವ ಎಲ್ಲಾ ಅಡೆತಡೆಗಳನ್ನು ಹಂತ-ಹಂತವಾಗಿ ಕೈಗೆತ್ತಿಕೊಳ್ಳುತ್ತೇವೆ
  • ಸುಪ್ರಿಂ ಕೋರ್ಟ್ ಅದೇಶ್ ಹಾಗೂ ಬೀದಿ ಬದಿ ವ್ಯಾಪಾರಿಗಳಿಗಾಗಿ ಇರುವ ಕಾಯ್ದೆ,ಕಾನೂನು ಅನುಷ್ಟಾನವನ್ನು ಪಾಲಿಸಲು ಕ್ರಮ ಕೈಗೊಳ್ಳಲಾಗುವುದು. ಸುಪ್ರಿಂ ಕೋರ್ಟ್ ಕೋರ್ಟ್ ನವರು ಹೊಸ ಐಡಿ ಕೊಡಲು ಹೇಳಿದ್ದಾರೆ, ವಿತರಿಸಲು ಹೇಳಿದ್ದೇನೆ. ಸುಪ್ರಿಂ ಕೋರ್ಟ್ ನಿರ್ದೇಶನದಂತೆ ಹೊಸ ಗುರುತಿನ ಚೀಟಿಗಳನ್ನು ತ್ವರಿತವಾಗಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದರು.

More articles

Latest article

Most read