ಬೆಂಗಳೂರು: ಬ್ಯಾಂಕ್ ಹಗರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಕೆಳಹಂತದ ನ್ಯಾಯಾಲಯ ವಿಧಿಸಿದ್ದ 3 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ. ಈ ಮೂಲಕ ಕೃಷ್ಣಯ್ಯ ಶೆಟ್ಟಿ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್
ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಕೃಷ್ಣಯ್ಯ ಶೆಟ್ಟಿ ಅವರಿಗೆ ವಿಧಿಸಿದ್ದ 3 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸುವುದರ ಜತೆಗೆ ಕೆಳಹಂತದ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ.
ಆದರೆ ದಂಡದ ಮೊತ್ತವನ್ನು ಠೇವಣಿ ಇರಿಸಲು ಹೈಕೋರ್ಟ್ ಕೃಷ್ಣಯ್ಯ ಶೆಟ್ಟಿಗೆ ಆದೇಶ ನೀಡಿದೆ.
1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಕೃಷ್ಣಯ್ಯ ಶೆಟ್ಟಿ ಮಾಲೀಕತ್ವದ ಬಾಲಾಜಿ ಕೃಪಾ ಎಂಟರ್ಪ್ರೈಸಸ್ ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ 7.17 ಕೋಟಿ ರೂ. ಬ್ಯಾಂಕ್ ಸಾಲ ಪಡೆದಿತ್ತು.ಆದರೆ ಈವರೆಗೆ ರೂ. 3.53 ಕೋಟಿ ರೂ. ಸಾಲ ತೀರಿಸಿಲ್ಲ ಎಂಬ ಆರೋಪ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ 120 ಬಿ, 409, 419, 420, 467, 471 ಹಾಗೂ ಸಿಆರ್ಪಿಸಿ ಸೆಕ್ಷನ್ 13 (1)ಡಿ, 13 (2) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.