Saturday, July 27, 2024

ಸೈಫರ್ ಪ್ರಕರಣ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ 10 ವರ್ಷ ಜೈಲು ಶಿಕ್ಷೆ

Most read

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಅಧಿಕಾರವಧಿಯಲ್ಲಿ ರಾಜತಾಂತ್ರಿಕ ಕೇಬಲ್ ಮಾಹಿತಿಯನ್ನು ಬಹಿರಂಗಪಡಿಸಿ ರಾಷ್ಟ್ರದ ಅಧಿಕೃತ ರಹಸ್ಯ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಈ ಆರೋಪದ ಮೇಲೆ ಪಾಕಿಸ್ತಾನದ ನ್ಯಾಯಾಲಯವು ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಬುವಲ್ ಹಸ್ನಾತ್ ಮುಹಮ್ಮದ್ ಜುಲ್ಕರ್ನೈನ್ ಅವರು ಮಂಗಳವಾರ ಈ ಆದೇಶವನ್ನು ನೀಡಿದ್ದು, ಎಂದು ಇಮ್ರಾನ್ ಖಾನ್ ಜೊತೆ ಅವರ ಅಧಿಕಾರವಧಿಯಲ್ಲಿ ವಿದೇಶಾಂಗ ಸಚಿವರಾಗಿದ್ದ ಶಾ ಮಹಮೂದ್ ಖುರೇಷಿ ಕೂಡ ಇದೇ ಪ್ರಕರಣದಲ್ಲಿ 10 ವರ್ಷಗಳ ಶಿಕ್ಷೆ ವಿಧಿಸಿದೆ.

ವಾಷಿಂಗ್ಟನ್‌ನಲ್ಲಿರುವ ದೇಶದ ರಾಯಭಾರಿ ಕಳುಹಿಸಿದ ರಹಸ್ಯ ಕೇಬಲ್‌ನ ವಿಷಯಗಳನ್ನು ಇಮ್ರಾನ್ ಖಾನ್ ಇಸ್ಲಾಮಾಬಾದ್‌ನಲ್ಲಿರುವ ಸರ್ಕಾರದೊಂದಿಗೆ ಹಂಚಿಕೊಂಡಿದ್ದಾರೆ ಎಂಬ ಆರೋಪಕ್ಕೆ ಈ ಪ್ರಕರಣ ಸಂಬಂಧಿಸಿದೆ.

ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಇಬ್ಬರಿಗೂ ವಿಶೇಷ ನ್ಯಾಯಾಲಯವು ತಲಾ 10 ವರ್ಷಗಳ ಶಿಕ್ಷೆ ವಿಧಿಸಿದೆ ಎಂದು ಇಮ್ರಾನ್ ಖಾನ್ ಅವರ ಪಕ್ಷ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಹೇಳಿದೆ.

ಈ ತೀರ್ಪಿನ ವಿರುದ್ಧ ಇಮ್ರಾನ್ ಖಾನ್ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಬಹುದು.

More articles

Latest article