ಕರ್ನಾಟಕದಿಂದ ರಾಜ್ಯಸಭೆಗೆ  ನಾಲ್ವರು ಅವಿರೋಧ ಆಯ್ಕೆ

ಬೆಂಗಳೂರು :   ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಬೇಕಿದ್ದ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ  ಎಂ. ನಾಗರಾಜ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಪವನ್ ಖೇರ, ಮನ್ಸೂರ್ ಅಲಿ ಖಾನ್  ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಉಮೇದುವಾರಿಕೆ ಸಲ್ಲಿಸಿದ್ದರು.

ಯಾವುದೇ ಹೆಚ್ಚುವರಿ ಅಭ್ಯರ್ಥಿಯು ಉಮೇದುವಾರಿಕೆಯನ್ನು ಸಲ್ಲಿಸದ ಕಾರಣ ಇಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳು ಹಾಗೂ ಚುನಾವಣಾಧಿಕಾರಿಯಾದ ಎಂ.ಕೆ. ವಿಶಾಲಾಕ್ಷಿ ಅವರು ಫಲಿತಾಂಶವನ್ನು ಪ್ರಕಟಿಸಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಎಂ. ನಾಗರಾಜ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಪವನ್ ಖೇರ, ಮನ್ಸೂರ್ ಅಲಿ ಖಾನ್  ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
ಬಿಜೆಪಿಯ ಎಂ.ನಾಗರಾಜ್ ಪ್ರತಿಕ್ರಿಯಿಸಿ, ಕೇಂದ್ರದ ವರಿಷ್ಠರು, ಮೋದಿ, ಅಮಿತ್‌ ಶಾ ಅವರಿಗೆ ಧನ್ಯವಾದ ಸಲ್ಲಿಸ್ತೇನೆ. ಈ ಹಿಂದೆ‌ ಕೋರ್‌ ಕಮಿಟಿ ಸದಸ್ಯರಿಗೆ ಮನವಿ ಮಾಡಿದ್ದೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಕೆಲಸ ಮಾಡ್ತಿದ್ದೇವೆ. ಈ ಅವಕಾಶವನ್ನು ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ‌ ಮಾಡ್ತೇನೆ ಎಂದರು.

 ಕಾಂಗ್ರೆಸ್​​​ನ ಪವನ್ ಖೇರಾ ಮಾತನಾಡಿ, ಮುಂದೆ ನಾನು ಇಲ್ಲಿಗೆ ಬರುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ. ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿದ್ದಕ್ಕೆ ಖುಷಿ ಇದೆ ಎಂದು ಸಂತಸ ವ್ಯಕ್ತಪಡಿಸಿದರು.

More articles

Latest article

Most read