ಬೆಂಗಳೂರು: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಹಣ ಸಂಗ್ರಹಿಸುತ್ತಿದೆ ಎನ್ನುವುದಕ್ಕೆ ಸಾಕ್ಷ್ಯಗಳನ್ನು ಒದಗಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಜೆಪಿ ಮುಖಂಡರಿಗೆ ಸವಾಲು ಹಾಕಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಣ ಸಂಗ್ರಹಿಸುತ್ತಿದೆ ಎಂದು ಬಿಜೆಪಿ ಮುಖಂಡರು ಯಾವುದೇ ಪುರಾವೆಗಳಿಲ್ಲದೆ ಆರೋಪ ಮಾಡಬಾರದು. ಅವರ ಬಳಿ ಏನಾದರೂ ಪುರಾವೆಗಳಿದ್ದರೆ ಬಿಡುಗಡೆ ಮಾಡಲಿ. ಅದನ್ನು ಬಿಟ್ಟು ಹಿಟ್ ಅಂಡ್ ರನ್ ಮಾಡವ ಕೆಲಸ ಮಾಡಬಾರದು ಎಂದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಂಸದ ಬಿ.ವೈ.ರಾಘವೇಂದ್ರ ಮೊದಲಾದ ಮುಖಂಡರು ಕಾಂಗ್ರೆಸ್ ಸರ್ಕಾರ ಹಣ ಸಂಗ್ರಹಿಸುತ್ತಿದೆ. ಸಚಿವರಿಗೆ ಟಾರ್ಗೆಟ್ ನೀಡಲಾಗಿದೆ ಎಂದು ಆರೋಪ ಮಾಡಿದ್ದರು.
ಬಿಹಾರ ಚುನಾವಣೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ಮಾಡಲಾಗುತ್ತದೆ.