ಬೆಳಗಾವಿ ಸುವರ್ಣ ವಿಧಾನಸೌಧದ ಅಂಗಳದಲ್ಲಿ ಬಾಪೂಜಿ ಪ್ರತಿಮೆ ಅನಾವರಣ

Most read

ಬೆಳಗಾವಿ:  ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆಯನ್ನು ಮಂಗಳವಾರ ಅನಾವರಣ ಮಾಡಲಾಯಿತು. ಇಂದು ಮಧ್ಯಾಹ್ನ 12 ಗಂಟೆಗೆ ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರತಿಮೆ ಅನಾವರಣಗೊಳಿಸಿದರು. ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಈ ಪ್ರತಿಮೆ ಸ್ಥಾಪಿಸಲಾಗಿದೆ.

ಬಾಪೂಜಿ ಪ್ರತಿಮೆ ಅನಾವರಣಗೊಳ್ಳುತ್ತಿದ್ದಂತೆ  ಬಣ್ಣಬಣ್ಣದ ಸಿಡಿಮದ್ದುಗಳನ್ನು ಹಾರಿಸಿ ಸಂಭ್ರಮಿಸಲಾಯಿತು. ಇದೇ ವೇಳೆ, ಗದುಗಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಲಾಂಛನವನ್ನೂ ಬಿಡುಗಡೆಗೊಳಿಸಲಾಯಿತು.

ಕಾಂಗ್ರೆಸ್ ನಾಯಕಿ, ಲೋಕಸಭಾ ಸದಸ್ಯೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಸತೀಶ ಜಾರಕಿಹೊಳಿ, ಜಿ‌.ಪರಮೇಶ್ವರ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಶಾಸಕರು, ಸಂಸದರು ಭಾಗವಹಿಸಿದ್ದಾರೆ.  ಅಧಿವೇಶನದ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಎಲ್ಲರನ್ನೂ ಸ್ವಾಗತಿಸಿದರು.

More articles

Latest article