ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಒಟ್ಟು 254 ಅಡುಗೆ ಅನಿಲ ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ತಿಳಿಸಿದ್ದಾರೆ.
ನಗರದ ಬೆಂಗಳೂರು ಉತ್ತರ ತಾಲ್ಲೂಕಿನ ಚೋಕ್ಕಸಂದ್ರದ ವಿನಾಯಕ ಗ್ಯಾಸ್ ಏಜೆನ್ಸಿಯಲ್ಲಿ 45 ಅನಧಿಕೃತವಾಗಿ ಸಂಗ್ರಹಿಸಿ ಇಡಲಾಗಿದ್ದ ಅಡುಗೆ ಅನಿಲ ಸಿಲಿಂಡರ್ಗಳನ್ನು ಹಾಗೂ ಯಲಹಂಕ ತಾಲ್ಲೂಕಿನ ಚಿಕ್ಕಜಾಲ ಹೋಬಳಿಯ ಅನ್ನಪೂರ್ಣ ಎಂಟರ್ ಪ್ರೈಸಸ್ ಮಳಿಗೆಯಲ್ಲಿ 209 ಗ್ಯಾಸ್ ಸಿಲಿಂಡರ್ ಗಳನ್ನು ಆಹಾರ ಇಲಾಖೆಯ ನಿರೀಕ್ಷಕರು ದಾಳಿ ನಡೆಸಿ ವಶಪಡಿಸಿಕೊಂಡು ಈ ಮಳಿಗೆಗಳ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

