ಉಡುಪಿ: ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಕಟಪಾಡಿಯಲ್ಲಿ ಪಲ್ಟಿಯಾಗಿದೆ.
ಎಲ್ಪಿಜಿ ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಮಗುಚಿ ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತವಾಯಿತು.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಪಲ್ಟಿಯಾದ ಟ್ಯಾಂಕರ್ನಲ್ಲಿ ಅನಿಲ ಸೋರಿಕೆ ತಡೆಯಲು ನಿರಂತರ ನೀರು ಹಾಯಿಸಿದರು

