ಹಾವು ಕಡಿದು 5 ವರ್ಷದ ಬಾಲಕಿ ಸಾವು

ಮುಂಡಗೋಡ: ಹಾವು ಕಡಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಂದು ನಡೆದಿದೆ. ಮುಂಡಗೋಡದ ಅಂಗನವಾಡಿಯ ಮಯೂರಿ ಸುರೇಶ ಕುಂಬಳೆಪ್ಪನವರ  ಹಾವು ಕಡಿದು ಮೃತಪಟ್ಟ ಬಾಲಕಿ. 5 ವರ್ಷದ ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ ಮೂತ್ರ ವಿಸರ್ಜನೆಗೆಂದು ಅಂಗನವಾಡಿಯ ಹಿಂಬದಿಗೆ ತೆರಳಿದಾಗ ಹಾವು ಕಡಿದಿದೆ. ಬಾಲಕಿ ತಕ್ಷಣ, ಕಾಲಿಗೆ ಹಾವು ಕಡಿಯಿತು ಎಂದು ಅಳುತ್ತಾ ಓಡಿ ಬಂದಿದ್ದಾಳೆ. ಈ ವೇಳೆ ಅಲ್ಲೆ ಇದ್ದ ಸ್ಥಳೀಯರು ವಿಷ  ಏರದಂತೆ ಸೆಣಬು ಕಟ್ಟಿಕೊಂಡು ಆಟೋದಲ್ಲಿ ಕೂಡಲೇ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾಳೆ. ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ ಸುರೇಶ ದಂಪತಿಗೆ ಇಬ್ಬರು ಹೆಣ್ಣುಮಕ್ಕಳು. ಮೃತ ಮಯೂರಿ ಕಿರಿಯ ಮಗಳು. ಬಾಲಕಿ  ಮೃತಪಟ್ಟ ಸುದ್ದಿ ಕೇಳಿ ಕುಟುಂಬವರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಅಂಗನವಾಡಿ ಕೇಂದ್ರಕ್ಕೆ ಸಿಪಿಐ ರಂಗನಾಥ ನೀಲಮ್ಮನವರ ಭೇಟಿ ನೀಡಿ ಕಾರ್ಯಕರ್ತೆ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದು ಮೃತ ಬಾಲಕಿಯ ಮನೆಗೆ ಭೇಟಿ ನೀಡಿದರು.

More articles

Latest article

Most read