ನವದೆಹಲಿ: ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಅಲೋಕ್ ಅರಾಧೆ ಅವರಿದ್ದ ದ್ವಿಸದಸ್ಯ ಪೀಠ ಲೈಂಗಿಕ ಶಿಕ್ಷಣ 9ನೇ ತರಗತಿಯಿಂದ ಬದಲಾಗಿ ಅದಕ್ಕೂ ಮುನ್ನವೇ ಆರಂಭಿಸಬೇಕು ಎಂದು ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಮಾಲೋಚನೆ ನಡೆಸಿ ಅಗತ್ಯ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳಬೇಕು. ಈ ಮೂಳಕ ಮಕ್ಕಳಿಗೆ ಋತುಚಕ್ರದ ಬಳಿಕ ನಡೆಯುವ ದೇಹದ ಬದಲಾವಣೆಗಳು ಹಾಗೂ ಕೈ ಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಕುರಿತು ತಿಳುವಳಿಕೆ ಸಿಗಲಿದೆ ಎಂದೂ ಹೇಳಿದೆ.
ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ 15 ವರ್ಷದ ಬಾಲಕನಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.