ಶಾಖೆಯಲ್ಲಿ ದೊಣ್ಣೆ ಹಿಡಿಯುವುದನ್ನು ಬಿಟ್ಟು ಬೆಂಗಳೂರು ಹಿರಿಮೆ ಕುರಿತು ತಿಳಿಯಿರಿ: ಅಶೋಕ್‌ ಟೀಕೆಗೆ ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

Most read

ಬೆಂಗಳೂರು: ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ. ನಮಸ್ತೆ ಟ್ರಂಪ್ ಗಾಗಿ ಗುಜರಾತಿನ ಅಹಮದಾಬಾದ್ ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಅವರು ವಿಧಾನಸಭೆ ವಿಪಕ್ಷ ನಾಯಕ ಆರ್.‌ ಅಶೋಕ್‌ ಅವರಿಗೆ ತಿರುಗೇಟು ನೀಡಿ

ಸನ್ಮಾನ್ಯ @RAshokaBJP ಅವರೇ,

ನಮಸ್ತೆ ಟ್ರಂಪ್ ಗಾಗಿ ಗುಜರಾತಿನ ಅಹಮದಾಬಾದ್ ನ ಅವ್ಯವಸ್ಥೆಗಳಿಗೆ, ಬಡತನಕ್ಕೆ, ಕಸದ ಕೊಂಪೆಗಳಿಗೆ ಟಾರ್ಪಲ್ ಹಾಕಿ ಮುಚ್ಚಿಟ್ಟಿದ್ದಂತಹ ಪರಿಸ್ಥಿತಿ ಬೆಂಗಳೂರಿನಲ್ಲಿಲ್ಲ ಎಂದಿದ್ದಾರೆ.

ಜಿ.20 ಶೃಂಗಸಭೆಗಾಗಿ ದೆಹಲಿಯ ಬಡವರಿಗೆ ದಿಗ್ಬಂಧನ ವಿಧಿಸಿ, ಬಡವರನ್ನು, ಬಡತನವನ್ನು ಬಂಧನದಲ್ಲಿಟ್ಟಿದ್ದಂತಹ ದುಃಸ್ಥಿತಿ ಬೆಂಗಳೂರಿಗೆ ಬಂದಿಲ್ಲ. ಛತ್ ಪೂಜೆಗಾಗಿ ನರ್ಮದಾ ನದಿಯ ಪಕ್ಕದಲ್ಲಿ ಫಿಲ್ಟರ್ ನೀರಿನ ಕೊಳ ನಿರ್ಮಿಸಿ, ನರ್ಮದಾ ನದಿಯ ಅವ್ಯವಸ್ಥೆಯನ್ನು ಮರೆಮಾಚಿದಂತಹ ದುಃಸ್ಥಿತಿ ನಮಗೆ ಒದಗಿ ಬಂದಿಲ್ಲ.

ಬೆಂಗಳೂರಿನ ಬಗ್ಗೆ ಬಿಜೆಪಿಯವರಿಗೆ ಹೆಮ್ಮೆ ಎನಿಸಿದಿರಬಹುದು, ನಮಗೆ ಹೆಮ್ಮೆ ಇದೆ.

ಬೆಂಗಳೂರಿನ ಮಹತ್ವದ ಬಗ್ಗೆ ಬಿಜೆಪಿಯವರಿಗೆ ಅರಿವಿಲ್ಲದಿರಬಹುದು, ಮರ್ಸಿಡಿಸ್ ಬೆಂಜ್ ನ CEOರಿಂದ ಹಿಡಿದು ದೇಶದ ಹೂಡಿಕೆದಾರರವರೆಗೂ ಅದರ ಅರಿವಿದೆ. ಜಾಗತಿಕ ಸ್ಟಾರ್ಟ್ ಅಪ್ ಎಕೊಸಿಸ್ಟಮ್ ಸೂಚ್ಯಾಂಕದಲ್ಲಿ ಬೆಂಗಳೂರು 14ನೇ ಸ್ಥಾನಕ್ಕೆ ಏರಿರುವುದು ನಮ್ಮ ಕಾರ್ಯವೈಖರಿಗೆ ಹಿಡಿದ ಕನ್ನಡಿ.

ಅಶೋಕ್ ಅವರು ಶಾಖೆಗೆ ಹೋಗಿ ದೊಣ್ಣೆ ಹಿಡಿಯದನ್ನು ಬಿಟ್ಟು ಜಗತ್ತಿನ ಆಗುಹೋಗುಗಳ ಬಗ್ಗೆ, ಬೆಂಗಳೂರಿನ ಹೆಗ್ಗಳಿಕೆಯ ಬಗ್ಗೆ ತಿಳಿಯುವ ಪ್ರಯತ್ನ ನಡೆಸಿದ್ದರೆ ಈ ರೀತಿಯ ಅಪ್ರಬುದ್ಧ ಹೇಳಿಕೆ ನೀಡುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

More articles

Latest article