ಗೋಧ್ರಾ ದುರಂತದ ರೀತಿ ಏನಾದರೂ ಆಗಬಹುದು ಈ ಬಗ್ಗೆ ನಮಗೆ ಮಾಹಿತಿ ಇದೆ ಎಂದು ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋಧ್ರಾ ದುರಂತದ ರೀತಿ ಏನಾದರೂ ಆಗಬಹುದು ಈ ಬಗ್ಗೆ ನಮಗೆ ಮಾಹಿತಿ ಇದೆ. ಮಾಹಿತಿ ಇರೊದಕ್ಕೆ ನಾನು ಹೇಳ್ತಿದಿನಿ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಗೋಧ್ರಾ ಅಂಥ ಘಟನೆ ರೀತಿಯಾ ಘಟನೆಗೆ ಪ್ರಚೋದನೆ ಕೊಡುತ್ತಿದ್ದಾರೆ. ಸಂಘದ ಕೆಲ ಪ್ರಮುಖರು ಪ್ರಚೋದಿಸುತ್ತಿದ್ದಾರೆ. ಕರ್ನಾಟಕದಲ್ಲಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು. ನಾನು ಹೇಳಬಹುದು. ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಪ್ರಚೋದನೆಕಾರಿ ಕೆಲಸ ಮಾಡಲು ಕುಮ್ಮಕ್ಕು ನೀಡುತ್ತಿದ್ದಾರೆ ಇದನ್ನ ನಿಲ್ಲಿಸಬೇಕು ಎಂದು ಬಿಕೆ ಹರಿಪ್ರಸಾದ್ ಹೇಳಿಕೆದ್ದಾರೆ.
ರಾಮ ಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಆಗಿದ್ರೆ ನಾವೆಲ್ಲರೂ ಹೋಗುತ್ತಿದ್ದೆವು. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು. ಶಂಕರಾಚಾರ್ಯರು ಮೂಲ ಗುರುಗಳು. ಅದೇ ರೀತಿ ಧರ್ಮ ಗುರುಗಳು ನಡೆಸಿಕೊಟ್ಟಿದ್ದರೆ ಅದು ಧಾರ್ಮಿಕ ಕಾರ್ಯಕ್ರಮ ಆಗುತ್ತಿತ್ತು. ಆದರೆ ರಾಮ ಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗ್ತಿದೆ ಎಂದು ಟೀಕಿಸಿದ್ದಾರೆ.
ಬಾಬರಿ ಮಸೀದಿ ಧ್ವಂಸ ಮಾಡಿದ್ದು ಕೂಡ ಅಪರಾಧವೇ. ಎಲ್ ಕೆ ಅಡ್ವಾಣಿಯವರ ಮೇಲೆ ಇರುವ ಕೇಸೇ ಇನ್ನೂ ಕ್ಲಿಯರ್ ಆಗಿಲ್ಲ. ಇದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಇಷ್ಟು ದಿನ ಹಳೆ ಕೇಸ್ ಮೇಲೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಹಾಗೇ ಬಿಟ್ಟಿದ್ದೇ ತಪ್ಪು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.