RCB ಅಭಿಮಾನಿಗಳಿಗೆ ಗುಡ್ ನ್ಯೂಸ್; ಫೈನಲ್‌ ಪಂದ್ಯದಲ್ಲಿ ಆಡಲಿದ್ದಾರೆ ಫಿಲ್ ಸಾಲ್ಟ್

ಅಹಮದಾಬಾದ್: ಇಂಡಿಯನ್ ಪ್ರೀಮಿಯರ್‌ ಲೀಗ್ (ಐಪಿಎಲ್) ಫೈನಲ್‌ಗೆ ಕೆಲವೇ ಗಂಟೆಗಳು ಬಾಕಿ ಇರುವಾಗ RCB ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಇಂದು ರಾತ್ರಿ ನಡೆಯಲಿರುವ ಆರ್ಸಿಬಿ ಮತ್ತು ಪಂಜಾಬ್ ಮಧ್ಯೆ ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ಫಿಲ್ ಸಾಲ್ಟ್ ಕಣಕ್ಕಿಳಿಯಲಿದ್ದಾರೆ.

ಫೈನಲ್ ಪಂದ್ಯಕ್ಕೂ ಮುನ್ನ ಆರ್ಸಿಬಿ ಆಟಗಾರರು ಅಭ್ಯಾಸ ನಡೆಸುವಾಗ ಸಾಲ್ಟ್ ಕಾಣಿಸಿಕೊಂಡಿಲ್ಲದಿರುವುದು ಆತಂಕ ಮೂಡಿಸಿತ್ತು. ಇಂಗ್ಲೆಂಡ್ ಮೂಲದ ಫಿಲ್ ಸಾಲ್ಟ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಅವರು ತವರಿಗೆ ತೆರಳಿದ್ದು, ಇಂದಿನ ಪಂದ್ಯದಲ್ಲಿ ಅವರು ಆಡುವುದು ಅನುಮಾನ ಎಂದು ಹೇಳಲಾಗುತ್ತಿತ್ತು. ಆದರೆ ಅವರ ಅಲಭ್ಯತೆ ಕುರಿತು ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಇದೀಗ ಇಂದಿನ ಫೈನಲ್ ಪಂದ್ಯದಲ್ಲಿ ಆಡುವ ಸಲುವಾಗಿ ಫಿಲ್ ಸಾಲ್ಟ್ ಅಹಮದಾಬಾದ್‌ಗೆ ಮರಳಿದ್ದಾರೆ.

ಪತ್ನಿಗೆ ಹೆರಿಗೆಯಾದ ಹಿನ್ನೆಲೆ ಮಗುವನ್ನು ನೋಡಲು ಸಾಲ್ಟ್ ತವರಿಗೆ ತೆರಳಿದ್ದರು. ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ಮತ್ತೆ ಅಹಮದಾಬಾದ್ ಗೆ ಫಿಲ್ ಸಾಲ್ಟ್ ಬಂದಿದ್ದಾರೆ. ಈ ಮೂಲಕ ಫೈನಲ್ ಆಡಲು ಆರ್ಸಿಬಿ ತಂಡಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಆರ್‌ಸಿಬಿ ಪರ 12 ಪಂದ್ಯ ಆಡಿರುವ ಸಾಲ್ಟ್ ಒಟ್ಟು 387 ರನ್ ಹೊಡೆದು ಟಾಪ್ 20 ಬ್ಯಾಟರ್ ಪಟ್ಟಿಯಲ್ಲಿ 20ನೇ ಸ್ಥಾನದಲ್ಲಿದ್ದಾರೆ

More articles

Latest article

Most read