Thursday, December 12, 2024

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿ ಅರೆಸ್ಟ್

Most read

ಬಿಜೆಪಿಯಿಂದ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ ಕೊಡಿಸುವುದಾಗಿ ವಂಚಿಸಿದ ಆರೋಪ ಎದುರಿಸುತಿದ್ದ ಗೋಪಾಲ್‌ ಜೋಶಿ ಅವರನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.

ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ ಫೂಲ್‌ ಸಿಂಗ್‌ ಚವ್ಹಾಣ್‌ ಅವರಿಂದ 2 ಕೋಟಿ ರೂ. ಪಡೆದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಗೋಪಾಲ್‌ ಜೋಶಿ ವಂಚಿಸಿದ್ದಾರೆ ಎಂಬ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಲಾಗಿತ್ತು. ಗೋಪಾಲ್‌ ಜೋಶಿ ಮಾತ್ರ ನಾಪತ್ತೆಯಾಗಿದ್ದರು. ಇಂದು ಮಧ್ಯಾಹ್ನ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ವರನ್ನು ಈವರೆಗೆ ಬಂಧಿಸಿಲಾಗಿದೆ.

More articles

Latest article