ನಟ ದರ್ಶನ್‌ ಗೆ ತಪ್ಪದ ಸಂಕಷ್ಟ; ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

Most read

ನಟ ದರ್ಶನ್‌ ಗೆ ತಪ್ಪದ ಸಂಕಷ್ಟ; ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್ ತೂಗುದೀಪ ಅವರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಮ್ಮತಿ ನೀಡಿದೆ. ದರ್ಶನ್ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಲು ಪಲೀಸರು ಗೃಹ ಇಲಾಖೆಗೆ ಮನವಿ ಸಲ್ಲಿಸಿತ್ತು. ಇದೀಗ ಸರ್ಕಾರ ಅಸ್ತು ಎಂದಿದ್ದು ಈ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್ ಅವರ ಆಪ್ತೆ ಪವಿತ್ರಾಗೌಡ ಸೇರಿದಂತೆ ಏಳು ಆರೋಪಿಗಳಿಗೆ ಸಂಕಷ್ಟ ಎದುರಾಗಿದೆ.

ಬೆಂಗಳೂರು ಪೊಲೀಸರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಹಿರಿಯ ವಕೀಲರಾದ ಅನಿಲ್ ಸಿ ನಿಶಾನಿ ಹಾಗೂ ಸಿದ್ದಾರ್ಥ್ ಲುಥಾರ ಅವರನ್ನು ನೇಮಕ ಮಾಡಲಾಗಿದೆ. ಎರಡು ಮೂರು ದಿನಗಳಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಸ್ಪೆಷಲ್‌ ಲೀವ್‌ ಪಿಟಿಷನ್‌ ಸಲ್ಲಿಸಲು ಪೊಲೀಸರು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಅಗತ್ಯ ದಾಖಲೆಗಳನ್ನು ಇಂಗ್ಲೀಷ್‌ ಭಾಷೆಗೆ ತರ್ಜುಮೆ ಮಾಡಿಸಲಾಗಿದೆ. ಸಧ್ಯ ದರ್ಶನ್‌ ಸೇರಿದಂತೆ ಎಲ್ಲ ಆರೋಪಿಗಳು ಜಾಮೀನು ಪಡೆದು ಹೊರ ಬಂದಿದ್ದಾರೆ. ಜೂನ್‌ 8 ರಂದು ರೇಣುಕಾಸ್ವಾಮಿ ಹತ್ಯೆ ನಡೆದಿದ್ದು, ಜೂನ್‌ 11 ರಂದು ನಟ ದರ್ಶನ್‌ ಬಂಧನವಾಗಿತ್ತು.

More articles

Latest article