ರಾಜ್ಯಪಾಲರು ಒಂದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಪಡುತ್ತಿದ್ದಾರೆ : ಯತೀಂದ್ರ ಸಿದ್ದರಾಮಯ್ಯ

Most read

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ವಿರೋಧಿಸಿ ಮೈಸೂರು ನಗರದಲ್ಲಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಯತೀಂದ್ರ, ರಾಜ್ಯಪಾಲರು ಕಾನೂನು ಮತ್ತು ಸಂವಿಧಾನಬಾಹಿರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಪಾಲರ ಕ್ರಮವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ರಾಷ್ಟ್ರಪತಿಯವರಿಗೆ ಮನವಿ ಮಾಡುತ್ತಾ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದೇವೆ ಎಂದು ಹೇಳಿದರು.

ರಾಜ್ಯಪಾಲರ ಕ್ರಮ ಒಂದು ರಾಜಕೀಯ ಪ್ರೇರಿತ ಮತ್ತು ಒಂದು ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವಾಗಿದೆ, ರಾಜ್ಯಪಾಲರ ಕಚೇರಿಯನ್ನು ರಾಜ್ಯ ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದು ಯತೀಂದ್ರ ಹೇಳಿದರು.

More articles

Latest article