Sunday, April 13, 2025

ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ

Most read

ಬೆಂಗಳೂರು: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಪ್ರಕರಣ ಕುರಿತು ತನಿಖೆ ನಡೆಸಲು ನಾಗೇಂದ್ರ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಜಾರಿ ನಿರ್ದೇಶನಾಲಯ (ED) ಮನವಿ ಮಾಡಿತ್ತು. ಅದರನ್ವಯ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದರಿಂದ ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾದಂತಾಗಿದೆ.

ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಅಂದು ಇಲಾಖೆಯ ಸಚಿವರಾಗಿದ್ದ ನಾಗೇಂದ್ರ ಅವರ ಹೆಸರು ಕೇಳಿ ಬಂದಿತ್ತು. ಈ ಆರೋಪ ಕೇಳಿ ಬಂದ ನಂತರ ನಾಗೇಂದ್ರ 2024ರ ಜೂನ್ 6 ರಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಾಗೇಂದ್ರ ಅವರನ್ನು ಶೀಘ್ರವೇ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ನಾಗೇಂದ್ರ ಅವರೂ ಮತ್ತೆ ಸಚಿವರಾಗಲು ಕಸರತ್ತು ನಡೆಸುತ್ತಲೇ ಇದ್ದರು. ಈ ಮಧ್ಯೆ ರಾಜ್ಯಪಾಲರು ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದರಿಂದ ಅವರ ಆಸೆಗೆ ತಣ್ಣೀರೆರಚಿದಂತಾಗಿದೆ.

More articles

Latest article