ಲೋಕಸಭೆ ಚುನಾವಣೆ 2024 ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾಗಿದ್ದು, ಹಿರಿಯ ನಾಯಕ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಲಾಗುತ್ತಿದೆ.
ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು ಅದರಂತೆ 25 ಕ್ಷೇತ್ರಗಳ ಪೈಕಿ 24 ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೊಷಣೆ ಮಾಡಿತ್ತು. ಆದರೆ, ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡದೆ ಕಾಯ್ದಿರಿಸಿತ್ತು. ಸದ್ಯ ಮಾರ್ಚ್ 28 ರಿಂದ ಚುನಾವಣೆ ಪ್ರಕ್ರಿಯೆ ಆರಂಭ, ನಾಮಪತ್ರ ಸಲ್ಲಿಕೆಗೆ ಚಾಲನೆ ದೊರೆಯುತ್ತಿದೆ. ಈ ಬೆನ್ನಲ್ಲೆ ಚಿತ್ರದುರ್ಗ ಟಿಕೆಟ್ ಘೋಷಣೆ ಮಾಡಲಾಗಿದೆ.
ಚಿತ್ರದುರ್ಗ ಪರಿಶಿಷ್ಟ ಜಾರಿ (ಎಸ್ಸಿ) ಮೀಸಲು ಕ್ಷೇತ್ರವಾಗಿದೆ. ಸೂಕ್ತ ಅಭ್ಯರ್ಥಿ ಸಿಗದ ಹಿನ್ನೆಲೆ ವಿಜಯಪುರ ಮೂಲದವರಾದರೂ, ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಬಿಎನ್ ಚಂದ್ರಪ್ಪ ಅವರು ಕಣಕ್ಕಿಳಿದಿದ್ದಾರೆ.