ಆಲಮಟ್ಟಿ ಜಲಾಶಯ ಎತ್ತರವನ್ನು 524 ಅಡಿಗಳಿಗೆ ಎತ್ತರಿಸಲು ಸರ್ಕಾರ ಬದ್ಧ: ಡಿಕೆಶಿ

Most read

ವಿಜಯಪುರ: ಆಲಮಟ್ಟಿ ಜಲಾಶಯದ ಎತ್ತರವನ್ನು 524 ಅಡಿಗಳಿಗೆ ಎತ್ತರಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಬೇಕಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆಲಮಟ್ಟಿ ಜಲಾಶಯ ಎತ್ತರವನ್ನು 524 ಅಡಿಗಳಿಗೆ ಎತ್ತರಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಬೇಕಿದೆ. ಅಧಿಸೂಚನೆ ಹೊರಡಿಸುವ ಮುನ್ನ ಇದರ ಕಾಮಗಾರಿ ನಡೆಸಬೇಕೆ ಬೇಡವೆ ಎಂದು ಚರ್ಚೆ ನಡೆಸುತ್ತೇವೆ. ಭೂಸ್ವಾಧೀನ ವಿಚಾರವಾಗಿ ತಾರತಮ್ಯವಿದೆ. ಕೆಲವರು ಬೆಂಗಳೂರಿನ ಭೂಮಿಗಿಂತ ಬೆಲೆಗಿಂತ ಹೆಚ್ಚು ಮೊತ್ತದ ಪರಿಹಾರವನ್ನು ಪಡೆಯಲು ಆದೇಶ ತಂದಿದ್ದಾರೆ. ಇಂತಹ ನೂನ್ಯತೆಗಳನ್ನು ಸರಿಪಡಿಸಬೇಕು. ಈ ಎಲ್ಲ ವಿಷಯಗಳನ್ನು ಕುರಿತು ಸೋಮವಾರ ಮುಖ್ಯಮಂತ್ರಿಗಳು ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ ಎಂದು ತಿಳಿಸಿದರು.

ಧರಣಿನಿರತರು ನೂರು ಬೇಡಿಕೆಗಳನ್ನು ಬೇಕಾದರೂ ಇಡಲಿ. ಕಾನೂನು ಚೌಕಟ್ಟಿನಲ್ಲಿ ಕಾರ್ಯರೂಪಕ್ಕೆ ತರಲು ಕ್ರಮ ಕೈಗೊಳ್ಳುತ್ತೇವೆ. ಆಲಮಟ್ಟಿ ಅಣೆಕಟ್ಟು ಎತ್ತರ 524 ಅಡಿಗೆ ಏರಿಸುವ ಬಗ್ಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ಅದನ್ನು ಮಾಡುವಷ್ಟರಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತೇವೆ. ಕೇಂದ್ರ ಸರ್ಕಾರ 6 ಸಾವಿರ ಕೋಟಿ ಅನುದಾನ ನೀಡಬೇಕಾಗಿದೆ ಎಂದರು.

ಒಂದು ದೇಶ ಒಂದು ಚುನಾವಣೆ ಮೂಲಕ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ ಕೇಂದ್ರ ಸರ್ಕಾರ ಹೊಂದಿದೆ. ಟಿಎಂಸಿ, ಡಿಎಂಕೆ, ಎಸ್ ಪಿ, ಕಮ್ಯುನಿಷ್ಟ್ ಸೇರಿದಂತೆ ಪ್ರಾದೇಶಿಕ ಪಕ್ಷಗಳಿಂದ ಇಂಡಿಯಾ ಒಕ್ಕೂಟದ ಸಂಖ್ಯಾಬಲ ಹೆಚ್ಚಾಗಿದೆ. ಹೀಗಾಗಿ ಈ ಪಕ್ಷಗಳನ್ನು ಮುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.

More articles

Latest article