ನರೇಗಾ ಯೋಜನೆ:ಕರ್ನಾಟಕಕ್ಕೆ ಕೇಂದ್ರದ ಅನ್ಯಾಯವನ್ನು ಅಂಕಿಅಂಶ ಸಹಿತಿ ಬಿಚ್ಚಿಟ್ಟ ಸಚಿವ ಪ್ರಿಯಾಂಕ್‌ ಖರ್ಗೆ

Most read

ಬೆಳಗಾವಿ: ಕಳೆದ ಮೂರು ವರ್ಷದಲ್ಲಿ ನರೇಂದ್ರ ಮೋದಿ ಸರ್ಕಾರ “ಮಹಾತ್ಮ ಗಾಂಧಿ ನರೇಗಾ” ಯೋಜನೆಯಡಿ ಕರ್ನಾಟಕಕ್ಕೆ ನೀಡಲಾಗುತ್ತಿದ್ದ ಮಾನವ ದಿನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿದೆಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆಪಾದಿಸಿದ್ದಾರೆ. ಈ ಸಂಬಂಧ ಅವರು ಎಕ್ಸ್‌ ನಲ್ಲಿ ಅಂಕಿ ಅಂಶಗಳನ್ನು ಹೊಂಚಿಕೊಂಡಿದ್ದು ಕೇಂದ್ರ ಸರ್ಕಾರ ಹೇಗೆ ಕರ್ನಾಟಕಕಕೆ ಅನ್ಯಾಯ ಎಸಗುತ್ತಾ ಬರುತ್ತಿದೆ ಎಂದು ವಿವರಿಸಿದ್ದಾರೆ.

2023-24ರ ಅವಧಿಯಲ್ಲಿ : 14 ಕೋಟಿಗಳಷ್ಟಿದ್ದ ಮಾನವ ದಿನಗಳ ಸಂಖ್ಯೆಯನ್ನ

2024-25ರ ಸಾಲಿನಲ್ಲಿ : 13 ಕೋಟಿಗೆ ಇಳಿಸಲಾಯಿತು, ನಂತರ

2025-26ರ ಸಾಲಿನಲ್ಲಿ : 9 ಕೋಟಿ ಮಾನವ ದಿನಗಳಿಗೆ ಇಳಿಸಿದೆ.

ಕಳೆದ ಮೂರು ವರ್ಷಗಳಲ್ಲಿ ಒಟ್ಟು 6 ಕೋಟಿ ಮಾನವ ದಿನಗಳನ್ನು ಕರ್ನಾಟಕ ರಾಜ್ಯಕ್ಕೆ ನಿರಾಕರಿಸಲಾಗಿದೆ.

ಈ ಯೋಜನೆ ಬಡಜನರ ಔದ್ಯೋಗಿಕ ಹಕ್ಕು. ಕಳೆದ ಮೂರು ವರ್ಷದ ಅವಧಿಯಲ್ಲಿ ಕರ್ನಾಟಕ ರಾಜ್ಯವೊಂದಲ್ಲೇ ಬರೊಬ್ಬರಿ 80.25 ಲಕ್ಷ ಬಡ ಕುಟುಂಬಗಳಿಗೆ ಈ ಯೋಜನೆಯಡಿ ಉದ್ಯೋಗ ಒದಗಿಸಲಾಗಿದೆ. ಈ ಪೈಕಿ 25.63 ಲಕ್ಷ ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬಗಳಿದ್ದು, 9.48 ಲಕ್ಷ ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಈ ಯೋಜನೆಯ ಫಲಾನುಭವಿಗಳಾಗಿವೆ.

ಇಡೀ ರಾಜ್ಯದಲ್ಲಿ 2023 ರಿಂದ ಇಂದಿನವರೆಗೆ ಒಟ್ಟು ರೂ.21,411 ವೆಚ್ಚದಲ್ಲಿ 15.94 ಲಕ್ಷಕ್ಕೂ ಹೆಚ್ಚು ಗ್ರಾಮಿಣ ಆಸ್ತಿಗಳನ್ನು ಸೃಜಿಸಲಾಗಿದೆ.

ಇಂತಹ ಕ್ರಾಂತಿಕಾರಕ ಯೋಜನೆಯನ್ನು ಬಡಜನರ ಔಧ್ಯೋಗಿಕ ಹಕ್ಕಿನ ಆಧಾರಿತ ಕಾರ್ಯಕ್ರವನ್ನಕೇಂದ್ರ ಸರ್ಕಾರದ ಬೆರಳೆಣಿಕೆ ಅಧಿಕಾರಿಗಳ ಮರ್ಜಿಯ ಆಧಾರಿತ ಕಾರ್ಯಕ್ರಮವನ್ನಾಗಿ ಬದಲಿಸಲು ಹೊರಟಿರುವುದು ಅಕ್ಷಮ್ಯ ಅಪರಾಧವೇ ಹೌದುಎಂದು ಕಿಡಿ ಕಾರಿದ್ದಾರೆ.

More articles

Latest article