ಲೋಕಸಭೆ ಚುನಾವಣೆ ಗೆಲ್ಲಲ್ಲು ಬಿಜೆಪಿ-ಕಾಂಗ್ರೆಸ್ ಭಾರೀ ಪೈಪೋಟಿ ನಡೆಯುತ್ತಿದೆ. ಈ ನಡುವೆಯೇ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರವನ್ನು ತಿಳಿಸಿದ್ದಾರೆ. ಹಾಗಾದರೆ ಅವರು ಈ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಮುಖ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಪೂರ್ವ ನದೆಹಲಿಯನ್ನು ಪ್ರತಿನಿಧಿಸುವ ಮಾಜಿ ಕ್ರಿಕೆಟಿಗ ಗಂಭೀರ್ ಅವರು ತಮ್ಮ ಅನುಯಾಯಿಗಳು ಮತ್ತು ಬೆಂಬಲಿಗರೊಂದಿಗೆ ಈ ಸುದ್ದಿಯನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಹಾಗಾದರೆ ತಮ್ಮ ರಾಜಕೀನ ನಿವೃತ್ತಿ ಬಗ್ಗೆ ಯಾರಿಗೆಲ್ಲ ತಿಳಿಸಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಈ ಕುರಿತು X ನಲ್ಲಿ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ, ಇದರಿಂದ ನಾನು ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ಕೇಂದ್ರೀಕರಿಸುತ್ತೇನೆ. ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳು. ಜೈ. ಹಿಂದ್ ಎಂದು ಬರೆದುಕೊಂಡಿದ್ದಾರೆ.