ಮಾಲೂರು: ನೀರು ಹಿಡಿಯುವ ವಿಚಾರಕ್ಕೆ ನಡುರಸ್ತೆಯಲ್ಲೇ ಮಹಿಳೆಯೊಬ್ಬರ ಮೇಲೆ ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಅವರ ಕುಟುಂಬ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೊರ್ನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಗೊಳಗಾದ ತೊರ್ನಹಳ್ಳಿ ಗ್ರಾಮದ ಲಕ್ಷ್ಮಿ ಅವರು ಕೋಲಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕಣ್ಣೀರು ಹಾಕಿದ್ದಾರೆ. ಏ.6 ರಂದು ಸರ್ಕಾರಿ ನೀರಿನ ಟ್ಯಾಂಕರ್ ನಲ್ಲಿ ನೀರು ಹಿಡಿಯುವ ವಿಚಾರಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷ ತಿಮ್ಮರಾಯಪ್ಪ ಹಾಗೂ ಅವರ ಕುಟುಂಬದವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ.
ನನ್ನ ಪತಿ ತಿಮ್ಮರಾಯಪ್ಪ ಅವರ ತೋಟದಲ್ಲಿ ಕ್ಯಾರೆಟ್ ತೊಳೆಯುವ ಕೆಲಸಕ್ಕೆ ಹೋಗುತ್ತಿದ್ದರು. ಈಗ ಅವರು ಕೆಲಸ ಬಿಟ್ಟಿದಕ್ಕೆ ದ್ವೇಷ ಸಾಧಿಸಿ ನನ್ನ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದಾರೆ. ತಿಮ್ಮರಾಯಪ್ಪ ಮತ್ತು ಅವರ ಕುಟುಂಬದವರ ಮೇಲೆ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇನೆ. ಆದರೂ ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಆರೋಪಿಗಳಿಗೆ ಶಾಸಕ ಕೆ.ವೈ. ನಂಜೇಗೌಡ ಅವರ ಬೆಂಬಲವಿದೆ.ನಮ್ಮ ಮೇಲೆ ಹಲ್ಲೆ ಮಾಡಿದವರನ್ನ ಬಂಧಿಸಿ ಕಾನೂನು ಕ್ರಮ ಜರಗಿಸುವಂತೆ ಆ ಮಹಿಳೆ ಕಣ್ಣೀರು ಹಾಕಿ ಕೋರಿಕೊಂಡಿದ್ದಾರೆ.