ಆದಿವಾಸಿಗಳ ಕಲ್ಯಾಣಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮಕ್ಕೆ 33.36 ಕೋಟಿ ಅನುದಾನ : ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು, ಅ. 30 : ರಾಜ್ಯದ ಆದಿವಾಸಿ ಹಾಗೂ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಪ್ರತ್ಯೇಕವಾಗಿ ‘ಕರ್ನಾಟಕ ಆದಿವಾಸಿ ಅಭಿವೃದ್ಧಿ ನಿಗಮ’ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಿಗಮದ ಸ್ಥಾಪನೆಗೆ 33.36 ಕೋಟಿ ಅನುದಾನ ಅಗತ್ಯವಿದ್ದು, ಈ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯು ನಿಗದಿಪಡಿಸಿರುವ ಅನುದಾನದ ಮಿತಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ರಾಜ್ಯದಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಈಗಾಗಲೇ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮೇದಾರ ಅಭಿವೃದ್ಧಿ ನಿಗಮ ಹಾಗೂ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮಗಳು ಕಾರ್ಯನಿರ್ವಹಿಸುತ್ತಿವೆ. ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿರುವ ಸಮುದಾಯಗಳ ವೃತ್ತಿ ಮತ್ತು ವಾಸಸ್ಥಳದ ಆಧಾರದಲ್ಲಿ ವಿವಿಧ ನಿಗಮಗಳ ವ್ಯಾಪ್ತಿಯನ್ನು ಗುರುತಿಸಲಾಗಿದೆ.

ಆದರೆ, ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುವ ಇರುಳ, ಸೋಲಿಗ, ಜೇನುಕುರುಬ, ಕಾಡುಕುರುಬ, ಕುಡಿಯ, ಸಿದ್ದಿ ಸೇರಿದಂತೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸುವ ಅಗತ್ಯವನ್ನು ಸರ್ಕಾರ ಗುರುತಿಸಿದೆ. ಈ ಹಿನ್ನೆಲೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ ಘೋಷಣೆಯಂತೆ ನೂತನ ನಿಗಮ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಒಬಿಸಿ ಮಹಿಳೆಯರಿಗೆ ಹೊಲಿಗೆ ಯಂತ್ರ:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ನಿಗಮಗಳ ಮೂಲಕ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ನೆರವಾಗುವ ಉದ್ದೇಶದಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸುವ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಯೋಜನೆಗೆ ಒಟ್ಟು 16.04 ಕೋಟಿ ರೂ. ವೆಚ್ಚವಾಗಲಿದ್ದು, ಒಟ್ಟು 9,243 ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಲು ನಿರ್ಧರಿಸಲಾಗಿದೆ. ಕಳೆದ ಸಾಲಿನಲ್ಲಿ 7,724 ಅರ್ಹ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸಲಾಗಿದೆ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ಸಂಬಂಧಿತ ಸಮುದಾಯ ಅಭಿವೃದ್ಧಿ ನಿಗಮಗಳ ಮೂಲಕ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಸಚಿವರು ಹೇಳಿದರು.

‘ಪ್ರಾಜೆಕ್ಟ್ ಕೆ-ಮಾನಿಟರ್’

ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಯೋಜನೆಗಳ ಮೇಲ್ವಿಚಾರಣೆಗೆ ‘ಪ್ರಾಜೆಕ್ಟ್ ಕೆ-ಮಾನಿಟರ್’ ಯೋಜನೆಯನ್ನು ಅನುಷ್ಠಾನಗೊಳಿಸಲು 14 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ.

ಈ ಯೋಜನೆಯ ಪ್ರಮುಖ ಉದ್ದೇಶಗಳೆಂದರೆ, ಸರ್ಕಾರಿ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸುವುದು, ಯೋಜನೆಗಳಿಂದ ಸಾರ್ವಜನಿಕರಿಗೆ ದೊರೆಯುತ್ತಿರುವ ಪ್ರಯೋಜನಗಳನ್ನು ಅಳೆಯುವುದು, ವಿವಿಧ ಇಲಾಖೆಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುವುದು, ಸಾರ್ವಜನಿಕ ಸೇವೆಗಳ ಗುಣಮಟ್ಟ, ಮೂಲಸೌಕರ್ಯ, ಉದ್ಯೋಗಾವಕಾಶ ಮತ್ತು ಇತರ ಆಡಳಿತಾತ್ಮಕ ಫಲಿತಾಂಶಗಳ ಕುರಿತು ಮಾಹಿತಿ ಸಂಗ್ರಹಿಸುವುದು ಹಾಗೂ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುವ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದು.

ಯೋಜನೆಯನ್ನು ಎರಡು ಹಂತಗಳಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಮೊದಲ ಹಂತದಲ್ಲಿ ಒಂದು ಲಕ್ಷ ಯೋಜನೆಗಳು ಅಥವಾ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸುವ ಗುರಿಯಿದ್ದರೆ, ಎರಡನೇ ಹಂತದಲ್ಲಿ 60 ಸಾವಿರ ಯೋಜನೆಗಳು ಅಥವಾ ಕಾಮಗಾರಿಗಳನ್ನು ಪರಿಶೀಲನೆಯ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ. ಈ ವ್ಯವಸ್ಥೆಯಿಂದ ಸರ್ಕಾರಿ ಯೋಜನೆಗಳ ಬಗ್ಗೆ ಹೆಚ್ಚು ಸಮಗ್ರ ಮಾಹಿತಿ ದೊರೆಯಲಿದ್ದು, ಸಾರ್ವಜನಿಕ ಹಣದ ಬಳಕೆ ಮತ್ತು ಯೋಜನೆಗಳ ಪರಿಣಾಮಕಾರಿತ್ವವನ್ನು ಮೌಲ್ಯಮಾಪನ ಮಾಡಲು ನೆರವಾಗಲಿದೆ ಎಂದು ಸಚಿವರು ಹೇಳಿದರು.

ಸಂಪುಟ ಸಭೆಯ ಇತರೆ ನಿರ್ಣಯಗಳು:

* ಸಂಗೊಳ್ಳಿಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ನಿರ್ಮಾಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ 228.95 ಕೋಟಿ ವೆಚ್ಚದ ಪ್ರಸ್ತಾವನೆಗೆ ಒಪ್ಪಿಗೆ.

* ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಗಟ್ಟಲು ರಚಿಸಿರುವ ವಿಶೇಷ ತನಿಖಾ ತಂಡದ ಕಾರ್ಯಾವಧಿಯನ್ನು 2026ರ ಜುಲೈ 1ರಿಂದ ಒಂದು ವರ್ಷದ ಅವಧಿಗೆ ವಿಸ್ತರಿಸಲು ಅನುಮೋದನೆ.

* ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿ ರೋಗನಿರ್ಣಯ ಸೇವೆಗಳನ್ನು ಬಲಪಡಿಸಲು 21.11 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯ ಉಪಕರಣಗಳನ್ನು ಖರೀದಿಗೆ ಒಪ್ಪಿಗೆ.

* ಹುಬ್ಬಳ್ಳಿಯಲ್ಲಿ 14.6 ಎಕರೆ ಪ್ರದೇಶದಲ್ಲಿ ಸಮಗ್ರ ಕ್ರೀಡಾಂಗಣ ನಿರ್ಮಾಣಕ್ಕೆ ಅನುಮೋದನೆ

* ಬೆಂಗಳೂರಿನಲ್ಲಿ ಹೊಸದಾಗಿ ಎರಡು ಜಲಸಂಗ್ರಹಾಗಾರಗಳ ನಿರ್ಮಾಣಕ್ಕೆ 61.50 ಕೋಟಿ ರೂ. ವೆಚ್ಚದ ಪ್ರಸ್ತಾವನೆಗೆ ಅನುಮತಿ.

* ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಜಿಐಎಸ್ ತಂತ್ರಜ್ಞಾನವನ್ನು ಬಳಸಿಕೊಂಡು ನಗರಾಭಿವೃದ್ಧಿ ಯೋಜನೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ರೂಪಿಸಲು 16.60 ಕೋಟಿ ರೂ. ವೆಚ್ಚದ ಜಿಐಎಸ್ ಆಧಾರಿತ ಮಹಾಯೋಜನೆಗೆ ಅನುಮತಿ.

* ಬೆಂಗಳೂರಿನಲ್ಲಿ 51.37 ಕೋಟಿ ವೆಚ್ಚದಲ್ಲಿ 40 ಎಂ.ಎಲ್.ಡಿ. ಸಾಮರ್ಥ್ಯದ ತ್ಯಾಜ್ಯನೀರಿನ ಸಂಸ್ಕರಣಾ ಘಟಕ ನಿರ್ಮಿಸುವ ಪ್ರಸ್ತಾನೆಗೆ ಒಪ್ಪಿಗೆ.

* ಕರ್ನಾಟಕ ಲೋಕಾಯುಕ್ತದ ನೇಮಕಾತಿ ನಿಯಮಗಳ ಪರಿಷ್ಕರಣೆಗೆ ಒಪ್ಪಿಗೆ

More articles

Latest article

Most read