ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಬಳಿಕ ಒಪ್ಪಿಗೆಗಾಗಿ ಕಳುಹಿಸಿದ್ದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅವರು, ರಾಜ್ಯಪಾಲರು ಕೆಲವೊಂದು ಸ್ಪಷ್ಟನೆಗಳನ್ನು ಕೋರಿ ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ.
2023ರ ಆಗಸ್ಟ್ ನಿಂದ ಈವರೆಗೆ 119 ಮಸೂಸೆಗಳಿಗೆ ಅಂಗೀಕಾರ ನೀಡಲಾಗಿದೆ. ಈ ಪೈಕಿ 83 ಮಸೂಸೆಗಳನ್ನು ಕಾಯ್ದೆಯಾಗಿ ಜಾರಿಗೊಳಿಸಲಾಗಿದೆ. 4 ಮಸೂದೆಗಳು ರಾಜ್ಯಪಾಲರ ಬಳಿ ಇವೆ. 7 ಮಸೂದೆಗಳ ಕುರಿತು ಸ್ಪಷ್ಟೀಕರಣ ಕೇಳಿದ್ದಾರೆ. 4 ಮಸೂದೆಗಳು ರಾಜ್ಯಪಾಲರ ಬಳಿ ಇವೆ. 5 ಮಸೂದೆಗಳನ್ನು ರಾಷ್ಟ್ರಪತಿಯವರಿಗೆ ಕಳುಹಿಸಿದ್ದಾರೆ ಎಂದು ವಿವರ ನೀಡಿದರು.