ಗೃಹಜ್ಯೋತಿ ಸಮೀಕ್ಷೆ ಒಂದು ತಿಂಗಳು ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆ.30ರವರೆಗೆ ವಿಸ್ತರಿಸಿದೆ.

2023ರ ಜುಲೈ ತಿಂಗಳಲ್ಲಿ ಜಾರಿಗೊಂಡಿದ್ದ ಗೃಹ ಜ್ಯೋತಿ ಯೋಜನೆಯ ಪುನರ್‌ ಪರಿಶೀಲನಾ ಕಾರ್ಯ ನಡೆಯಲಿದ್ದು, ಜುಲೈ 1, 2026 ರಿಂದ ಗೃಹ ಜ್ಯೋತಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆಗಸ್ಟ್‌ 31ರವರೆಗೆ ಸರ್ಕಾರ ಅವದಿ ನಿಗದಿ ಮಾಡಿತ್ತು. ಇದೀಗ ಒಂದು ತಿಂಗಳ ಕಾಲ ಅವದಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ಮೇ 2026ರ ಅಂತ್ಯಕ್ಕೆ 68,86,860 ಗೃಹ ಜ್ಯೋತಿ ಫಲಾನುಭವಿಗಳಿದ್ದು, ಆಗಸ್ಟ್‌ 31ರವರೆಗೆ 46,70,588 ಫಲಾನುಭವಿಗಳ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಶೇಕಡಾ 70ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ.

ಸಮೀಕ್ಷೆ ಕುರಿತು ಮಾಹಿತಿ ಪಡೆಯಲು ಬೆಸ್ಕಾಂ ನಿಗಮ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದ್ದು, 9480816111, 9480816112, 9480816113 ಮತ್ತು 9480816114 ಗೆ ಸಂಪರ್ಕಿಸಲು ಕೋರಲಾಗಿದೆ.

More articles

Latest article

Most read