ಗೃಹಲಕ್ಷ್ಮಿ ಹಣದಿಂದ B.Ed ಪರೀಕ್ಷೆ ಶುಲ್ಕ ಕಟ್ಟಿದ ವಿದ್ಯಾರ್ಥಿ ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಟ್ವೀಟ್

Most read

ಕುಟುಂಬ ಸಾಲದ ಸುಳಿಯಲ್ಲಿದ್ದು ಗೃಹಲಕ್ಷ್ಮಿ ಹಣದಿಂದ B.Ed 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನ ಕಟ್ಟಿದೆ ಎಂದು ಟ್ವೀಟ್‌ ಮಾಡಿ ಸಂತಸ ಹಂಚಿಕೊಂಡಿದ್ದ ವಿದ್ಯಾರ್ಥಿಯ ಬಗ್ಗೆ ಮರು ಟ್ವೀಟ್‌ ಮಾಡಿ ಸಿಎಂ ಸಿದ್ದರಾಮಯ್ಯ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಈ ಕುರಿತು ಸುದೀರ್ಘ ಟ್ವೀಟ್‌ ಮಾಡಿರುವ ಅವರು, ಬಡತನದ ಕಾರಣಕ್ಕಾಗಿ ಶಿಕ್ಷಣ ವಂಚಿತರಾಗಿರುವ ಮಕ್ಕಳನ್ನು ನನ್ನ ಬಾಲ್ಯದಿಂದಲೂ ನೋಡುತ್ತಾ ಬಂದಿದ್ದೇನೆ, ಇಂದಿಗೂ ನಮ್ಮ ನಡುವೆ ಅಂತಹಾ ಉದಾಹರಣೆಗಳು ಸಾಕಷ್ಟು ಸಿಗಲಿವೆ. ಸ್ವತಃ ನಾನೇ ನನ್ನಿಷ್ಟದ ಕಾನೂನು ವ್ಯಾಸಂಗಕ್ಕಾಗಿ ನಡೆಸಿದ ಹೋರಾಟ ಈ ಕ್ಷಣ ನೆನಪಾಗುತ್ತಿದೆ ಎಂದಿದ್ದಾರೆ.


ಮುಂದುವರೆದು, ಅಂದು ಯಾವುದೋ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿ, ಕೃಷಿಯಲ್ಲಿ ತೊಡಗಿಕೊಂಡಿದ್ದರೆ ನಾನು ಇಂದು ಮುಖ್ಯಮಂತ್ರಿಯಾಗಿ ಕೋಟ್ಯಂತರ ಕನ್ನಡಿಗರ ಸೇವೆ ಮಾಡುವ ಭಾಗ್ಯ ನನ್ನದಾಗುತ್ತಿರಲಿಲ್ಲ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಬಡತನದಲ್ಲೂ ಕಲಿಕೆಯೆಡೆಗಿನ ಈ ಯುವಕನ ಹಂಬಲ ಕಂಡು ನನಗೆ ಖುಷಿಯಾಯಿತು. ಗೃಹಲಕ್ಷ್ಮಿ ಯೋಜನೆ ನಿಜವಾಗಿ ತಲುಪಬೇಕಿರುವುದು ಮತ್ತು ತಲುಪುತ್ತಿರುವುದು ಇಂತಹ ಜನರನ್ನೆ. ತನಗೆ ಬಂದ ಗೃಹಲಕ್ಷ್ಮಿಯ ಹಣವನ್ನು ಕಡುಬಡತನದಲ್ಲೂ ಕೂಡಿಟ್ಟು ಮಗನ ಶಿಕ್ಷಣಕ್ಕಾಗಿ ಕೊಟ್ಟ ಆ ತಾಯಿಯ ಪ್ರೀತಿ – ಕಾಳಜಿಗೆ ಧನ್ಯವಾದ ತಿಳಿಸಿದ್ದಾರೆ.

ಬಿ.ಇಡಿ ಶಿಕ್ಷಣ ಮುಗಿಸಿ ಶಿಕ್ಷಕನಾಗಿ ನೂರಾರು ಮಕ್ಕಳ ಬದುಕು ರೂಪಿಸುವಂತಾಗು. ಇಂದು ನೀನು ಧನ್ಯವಾದ ತಿಳಿಸಿದ್ದಕ್ಕಿಂತ ಹೆಚ್ಚು ಖುಷಿ ಅಂದು ನನಗಾಗಲಿದೆ ಎಂದಿದ್ದಾರೆ.

More articles

Latest article