ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಶಿವಕುಮಾರ ಸ್ಪರ್ಧೆ ಮಾಡಲ್ಲ: ಜಿಟಿ ದೇವೇಗೌಡ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಇದನ್ನು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿದ್ದೇನೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆ ಗೆಲ್ಲಲು ಡಿಕೆ ಶಿವಕುಮಾರ್ ತಂತ್ರ ಮಾಡಿರುವುದು ನಿಜ. ಅವರ ಮಾತುಗಳಲ್ಲಿ ತಂತ್ರಗಾರಿಕೆ ಇದೆ ಅಷ್ಟೇ, ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬದಲಾಗಿ ಡಿಕೆ ಸುರೇಶ್‌ರನ್ನ ಕಣಕ್ಕಿಳಿಸುವ ದೃಷ್ಟಿಯಿಂದ ನಾನು ಬಂದರೆ ಮತ ಹಾಕುತ್ತೀರಾ ಎಂದು ಜನರನ್ನು ಪರೋಕ್ಷವಾಗಿ ಕೇಳುತ್ತಿದ್ದಾರೆ ಅಷ್ಟೇ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ನಾನೇ ಸ್ಪರ್ಧೆ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಸಿಪಿ ಯೋಗೇಶ್ವರ್ ನನ್ನ ಪರವಾಗಿದ್ದಾರೆ ಎಂದಷ್ಟೇ ಹೇಳಿದ್ದಾರೆ. ಆದರೆ ಯಾರು ಸ್ಪರ್ಧಿಸಬೇಕು ಎಂಬುದು ಅಂತಿಮವಾಗಿ ಮೈತ್ರಿ ನಾಯಕರು ಕುಳಿತು ತೀರ್ಮಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

More articles

Latest article

Most read